ಕೊಡಗು ವಿಶ್ವವಿದ್ಯಾಲಯದ ಜ್ಞಾನ ಕಾವೇರಿ ಕ್ಯಾಂಪಸ್‌ನಲ್ಲಿ ಶಿಕ್ಷಕರ ದಿನಾಚರಣೆ
admincoorgdaily

ಕುಶಾಲನಗರ: ಕೊಡಗು ವಿಶ್ವವಿದ್ಯಾಲಯದ ಜ್ಞಾನ ಕಾವೇರಿ ಕ್ಯಾಂಪಸ್‌ನಲ್ಲಿ ಜರುಗಿದ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮದಲ್ಲಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ
ಕೊಡಗು ವಿಶ್ವವಿದ್ಯಾಲಯದ ಕುಲಸಚಿವರು (ಮೌಲ್ಯಮಾಪನ) ಆದ ಡಾ. ಸುರೇಶ್ ಎಂ. ಅವರು ಪುಷ್ಪಾರ್ಚನೆ ನೆರವೇರಿಸಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಕೊಡಗು ವಿಶ್ವವಿದ್ಯಾಲಯದ ವಿವಿಧ ವಿಭಾಗದ ಬೋಧಕ ವೃಂದದವರು, ಆಡಳಿತ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಉಪನ್ಯಾಸಕರಾದ ಡಾ. ಜ಼ಮೀರ್ ಅಹಮದ್ ನಿರೂಪಿಸಿದರು.