Kodagu

ಕೊಡವ ಹೆರಿಟೇಜ್ ಸೆಂಟರ್ ಮುಂದುವರಿದ ಕಾಮಗಾರಿಗೆ 5 ಕೋಟಿ ವೆಚ್ಚದ ಟೆಂಡರ್ ಆಹ್ವಾನ; ಯೋಜನೆಗೆ ಮತ್ತಷ್ಟು ವೇಗ

admincoorgdaily

ಕೊಡವ ಹೆರಿಟೇಜ್ ಸೆಂಟರ್ ಮುಂದುವರಿದ ಕಾಮಗಾರಿಗೆ 5 ಕೋಟಿ ವೆಚ್ಚದ ಟೆಂಡರ್ ಆಹ್ವಾನ; ಯೋಜನೆಗೆ ಮತ್ತಷ್ಟು ವೇಗ
ಮಡಿಕೇರಿ: ಕೊಡವ ಸಮುದಾಯದ ಶ್ರೀಮಂತ ಇತಿಹಾಸ, ಸಂಸ್ಕೃತಿ, ಪರಂಪರೆ ಹಾಗೂ ವಿಶಿಷ್ಟ ಜೀವನಶೈಲಿಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಮಹತ್ವಾಕಾಂಕ್ಷೆಯ ಕೊಡವ ಹೆರಿಟೇಜ್ ಸೆಂಟರ್ ಯೋಜನೆಗೆ ಇದೀಗ ಮತ್ತಷ್ಟು ವೇಗ ದೊರೆತಿದೆ.

ಮಡಿಕೇರಿ ಸಮೀಪ ನಿರ್ಮಾಣಗೊಳ್ಳುತ್ತಿರುವ ಕೊಡವ ಹೆರಿಟೇಜ್ ಸೆಂಟರ್‌ನ ಮುಂದುವರಿದ ಕಾಮಗಾರಿಗಾಗಿ ₹5 ಕೋಟಿ ವೆಚ್ಚದಲ್ಲಿ ಟೆಂಡರ್ ಆಹ್ವಾನಿಸಲಾಗಿದೆ. ಈ ಮೂಲಕ ಬಹುದಿನಗಳ ನಿರೀಕ್ಷೆಯಲ್ಲಿದ್ದ ಯೋಜನೆಯ ಕಾಮಗಾರಿಯನ್ನು ಮುಂದುವರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ.

ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ಮಂತರ್ ಗೌಡ ಅವರು ಕೊಡವ ಸಮುದಾಯದ ಬಹುದಿನಗಳ ಆಶಯವಾಗಿರುವ ಈ ಯೋಜನೆ ಸಾಕಾರಗೊಳ್ಳಲು ನಿರಂತರವಾಗಿ ಒತ್ತು ನೀಡುತ್ತಿದ್ದು, ಇದೀಗ ಟೆಂಡರ್ ಪ್ರಕ್ರಿಯೆ ಆರಂಭಗೊಂಡಿರುವುದು ಯೋಜನೆಯ ಅನುಷ್ಠಾನದತ್ತ ಮತ್ತೊಂದು ಮಹತ್ವದ ಹೆಜ್ಜೆಯಾಗಿದೆ.

ಕೊಡವ ಸಂಸ್ಕೃತಿ, ಸಂಪ್ರದಾಯ, ಇತಿಹಾಸ, ಕಲೆ ಹಾಗೂ ವಿಶಿಷ್ಟ ಪರಂಪರೆಯನ್ನು ಸಂರಕ್ಷಿಸಿ, ಪ್ರವಾಸಿಗರಿಗೆ ಮತ್ತು ಯುವ ಪೀಳಿಗೆಗೆ ಪರಿಚಯಿಸುವ ಉದ್ದೇಶ ಹೊಂದಿರುವ ಈ ಕೇಂದ್ರವು ಕೊಡಗಿನ ಸಾಂಸ್ಕೃತಿಕ ಪರಂಪರೆಯ ಪ್ರಮುಖ ತಾಣವಾಗಿ ರೂಪುಗೊಳ್ಳುವ ನಿರೀಕ್ಷೆಯಿದೆ.