ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ 23ನೇ ವಾರ್ಷಿಕೋತ್ಸವ ಸೆ.24 ರಿಂದ ಆರಂಭ
admincoorgdaily

ಮಡಿಕೇರಿ ಸೆ.15 : ನಗರದ ರಾಜಾಸೀಟ್ ರಸ್ತೆಯಲ್ಲಿರುವ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನೆಯ 23ನೇ ವಾರ್ಷಿಕೋತ್ಸವ ಸೆ.24ರಿಂದ 26ರವರೆಗೆ ವಿವಿಧ ಧಾರ್ಮಿಕ ಕೈಂಕರ್ಯ ಹಾಗೂ ಪೂಜಾ ಕಾರ್ಯಕ್ರಮಗಳೊಂದಿಗೆ ಜರುಗಲಿದೆ.
ಸೆ.24ರಂದು ಸಂಜೆ 6 ಗಂಟೆಗೆ ಗುರು ಗಣಪತಿ ಪೂಜೆ, ಪುಣ್ಯಾಹ, ಸಂಕಲ್ಪ, ದುರ್ಗಾ ಸಪ್ತಶತಿ ಪಾರಾಯಣ, ಮಹಾಪೂಜೆ, ದೀಪಾರಾಧನೆ ಹಾಗೂ ತೀರ್ಥಪ್ರಸಾದ ವಿನಿಯೋಗ ನಡೆಯಲಿದೆ.
ಸೆ.25ರಂದು ಬೆಳಿಗ್ಗೆ 8 ಗಂಟೆಗೆ ಚಂಡಿಕಾ ಹೋಮ, ಮಧ್ಯಾಹ್ನ 12 ಗಂಟೆಗೆ ಪೂರ್ಣಾಹುತಿ, ಮಹಾಮಂಗಳಾರತಿ ಹಾಗೂ ತೀರ್ಥಪ್ರಸಾದ ವಿನಿಯೋಗವಾಗಲಿದೆ. ಸಂಜೆ 6 ಗಂಟೆಯಿಂದ ವಾರ್ಷಿಕೋತ್ಸವ ಕಾರ್ಯಕ್ರಮಗಳು ಆರಂಭಗೊಂಡು ಗುರು ಗಣಪತಿ ಪೂಜೆ, ಪುಣ್ಯಾಹ, ಸಂಕಲ್ಪ, ಕಳಶಸ್ಥಾಪನೆ, ದೀಪಾರಾಧನೆ, ಅಷ್ಟಾವಧಾನ ಸೇವೆ ಹಾಗೂ ತೀರ್ಥಪ್ರಸಾದ ವಿನಿಯೋಗ ನಡೆಯಲಿದೆ.
ಸೆ.26ರಂದು ಗುರು ಗಣಪತಿ ಪೂಜೆ, ಪುಣ್ಯಾಹ, ಗಣಪತಿ ಹೋಮ, ಕಲಾಹೋಮ, ತತ್ವಹೋಮ, ತತ್ವಶಾಂತಿ ಹೋಮ, ದುರ್ಗಾ ಹೋಮ, ತತ್ವಕಲಶಾಭಿಷೇಕ, ಮಹಾಪೂಜೆ, ತೀರ್ಥಪ್ರಸಾದ ವಿನಿಯೋಗ ಹಾಗೂ ಮಧ್ಯಾಹ್ನ 12.30ಕ್ಕೆ ಅನ್ನಸಂತರ್ಪಣೆಯಾಗಲಿದೆ. ವಾರ್ಷಿಕೋತ್ಸವದ ಎಲ್ಲಾ ದೇವತಾ ಕಾರ್ಯಗಳಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಾಲಯದ ಆಡಳಿತ ಮಂಡಳಿ ಮನವಿ ಮಾಡಿದೆ.
ಅನ್ನಸಂತರ್ಪಣೆಗೆ ಅಗತ್ಯವಿರುವ ಅಕ್ಕಿ, ಬೇಳೆ, ದವಸ-ಧಾನ್ಯ, ಬೆಲ್ಲ, ತರಕಾರಿ ಮತ್ತಿತರ ಸಾಮಾಗ್ರಿಗಳನ್ನು ದಾನಿಗಳಿಂದ ಸ್ವೀಕರಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.