Kodagu

ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ

admincoorgdaily

ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ
ಮಡಿಕೇರಿ: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಮೂರು ದಿನಗಳ ಕಾಲ ವಿವಿಧ ಧಾರ್ಮಿಕ ಕೈಂಕರ್ಯಗಳೊAದಿಗೆ ಶ್ರದ್ಧಾಭಕಿಯಿಂದ ಜರುಗಿತು.
ಸೆ.24ರಂದು ಸಂಜೆ ಗುರು ಗಣಪತಿ ಪೂಜೆ, ಪುಣ್ಯಾಹ, ಸಂಕಲ್ಪ, ದುರ್ಗಾ ಸಪ್ತಶತಿ ಪಾರಾಯಣ, ಮಹಾಪೂಜೆ, ದೀಪಾರಾಧನೆ ಹಾಗೂ ತೀರ್ಥಪ್ರಸಾದ ವಿನಿಯೋಗ ನಡೆಯಿತು.

ಸೆ.25ರಂದು ಬೆಳಿಗ್ಗೆ ಚಂಡಿಕಾ ಹೋಮ, ಮಧ್ಯಾಹ್ನ ಪೂರ್ಣಾಹುತಿ, ಮಹಾಮಂಗಳಾರತಿ ಹಾಗೂ ತೀರ್ಥಪ್ರಸಾದ ವಿನಿಯೋಗವಾಯಿತು. ಸಂಜೆ ವಾರ್ಷಿಕೋತ್ಸವ ಕಾರ್ಯಕ್ರಮಗಳು ಆರಂಭಗೊಂಡು ಗುರು ಗಣಪತಿ ಪೂಜೆ, ಪುಣ್ಯಾಹ, ಸಂಕಲ್ಪ, ಕಳಶಸ್ಥಾಪನೆ, ದೀಪಾರಾಧನೆ, ಅಷ್ಟಾವಧಾನ ಸೇವೆ ಹಾಗೂ ತೀರ್ಥಪ್ರಸಾದ ವಿನಿಯೋಗವಾಯಿತು.

ಸೆ.26ರಂದು ಗುರು ಗಣಪತಿ ಪೂಜೆ, ಪುಣ್ಯಾಹ, ಗಣಪತಿ ಹೋಮ, ಕಲಾಹೋಮ, ತತ್ವಹೋಮ, ತತ್ವಶಾಂತಿ ಹೋಮ, ದುರ್ಗಾ ಹೋಮ, ತತ್ವಕಲಶಾಭಿಷೇಕ, ಮಧ್ಯಾಹ್ನ ಮಹಾಪೂಜೆ, ತೀರ್ಥಪ್ರಸಾದ ವಿನಿಯೋಗ ಹಾಗೂ ನೂರಾರು ಭಕ್ತರಿಗೆ ಅನ್ನಸಂತರ್ಪಣೆಯಾಯಿತು.