ಹಗರಣಗಳ ಸುಳಿಯಲ್ಲಿರುವ ಕಾಂಗ್ರೆಸ್ ನೇತೃತ್ವದ ಸರ್ಕಾರದಿಂದ ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ:ಸಂಸದ ಯದುವೀರ್ ಒಡೆಯರ್

ಸೋಮವಾರಪೇಟೆ:- ಹಗರಣಗಳ ಸುಳಿಯಲ್ಲಿರುವ ಕಾಂಗ್ರೆಸ್ ನೇತೃತ್ವದ ಸರ್ಕಾರದಿಂದ ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ ಎಂದು ಕೊಡಗು ಮೈಸೂರು ಸಂಸದ ಯದುವೀರ್ ಒಡೆಯರ್ ಟೀಕಿಸಿದ್ದಾರೆ.ಅವರು ಪಟ್ಟಣದ ಕೊಡವ ಸಮಾಜದಲ್ಲಿ ಆಯೋಜಿಸಲಾಗಿದ್ದ ಪಕ್ಷದ ಕಾರ್ಯಕರ್ತರ ಸಭೆ ಹಾಗೂ ಸಾರ್ವಜನಿಕ ಅಹವಾಲು ಆಲಿಸಿ ಮಾತನಾಡಿದರು.
ರಾಜ್ಯದಲ್ಲಿ ಎರೆಡು ವರ್ಷ ಪೂರೈಸಿದ ರಾಜ್ಯ ಸರ್ಕಾರ ಏನು ಮಾಡಿದೆ ಎಂದು ಪ್ರಶ್ನಿಸಿದ ಅವರು ಪ್ರತಿನಿತ್ಯ ಒಂದಲ್ಲಾ ಒಂದು ಹಗರಣಗಳ ಸುಳಿಯಲ್ಲಿ ಸಿಲುಕುತಿದೆ.ರಾಜ್ಯದಲ್ಲಿ ಈಗ ನಡೆಯುತ್ತಿರುವ ಬಹುತೇಕ ಅಭಿವೃದ್ಧಿ ಕಾರ್ಯಗಳು ಕೇಂದ್ರಸರ್ಕಾರದ್ದು ಎಂದರು.ಕೊಡಗಿನಲ್ಲಿ ನಾವು ಎರೆಡು ಶಾಸಕರುಗಳನ್ನು ಕಳೆದು ಕೊಂಡಿದ್ದೇವೆ ಆದರೆ ಆಡಳಿತ ಪಕ್ಷದಿಂದ ಗೆದ್ದಿರುವ ಶಾಸಕರುಗಳಿಗೆ ಅಭಿವೃದ್ಧಿ ಕಾರ್ಯ ಮಾಡಲು ಸಾಧ್ಯವಾಗುತಿಲ್ಲವೆಂದರು.
ಹಿಂದೆ ಬಿಜೆಪಿ ಸರ್ಕಾರವಿದ್ದಾಗ ಕೊಡಗಿನ ರಸ್ತೆಗಳು ಹೇಗಿದ್ದವು ಈಗ ಹೇಗಿದೆ ರಸ್ತೆಗಳ ಅಭಿವೃದ್ಧಿ ಮಾಡಬೇಕಾಗಿದ್ದು ರಾಜ್ಯಸರ್ಕಾರದ ಹೊಣೆ ಎಂದರು.ರಾಜ್ಯ ಸರ್ಕಾರದ ದುರಾಡಳಿತವನ್ನು ಖಂಡಿಸಬೇಕಾಗಿದ್ದು,ಪ್ರತಿಭಟಿಸಬೇಕಾಗಿದ್ದು ನಮ್ಮೆ ಹೊಣೆ ,ಇಂತಹ ಸರ್ಕಾರವನ್ನು ಅಂತ್ಯಗೊಳಿಸಿ ಮುಂದೆ ಸುಬಿಕ್ಷ ಹಾಗೂ ಜನಪರವಾದ ಬಿಜೆಪಿ ಸರಕಾರವನ್ನು ಆಡಳಿತಕ್ಕೆ ಬೇಕಾಗಿರುವುದು ನಮ್ಮೆಲ್ಲರ ಕರ್ತವ್ಯವಾಗಬೇಕೆಂದರು .
ಕಾರ್ಯಕ್ರಮದಲ್ಲಿ ಮಾಜಿ ಶಾಸಕರುಗಳಾದ ಎಂ.ಪಿ.ಅಪ್ಪಚ್ಚು ರಂಜನ್,ಕೆ.ಜಿ.ಬೋಪಯ್ಯ,ಜಿಲ್ಲಾ ಬಿಜೆಪಿ ಅಧ್ಯಕ್ಷ ರವಿಕಾಳಪ್ಪ , ನಿಕಟ ಪೂರ್ವ ಅಧ್ಯಕ್ಷ ಭಾರತೀಶ್,ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಮಹೇಶ್ ತಿಮ್ಮಯ್ಯ, ಪ್ರದಾನ ಕಾರ್ಯದರ್ಶಿ ವಿ.ಕೆ.ಲೋಕೇಶ್,ಮಂಡಲ ಬಿಜೆಪಿ ಅಧ್ಯಕ್ಷ ಗೌತಮ್,ಜಿಲ್ಲಾ ಎಸ್.ಸಿ.ಮೋರ್ಚಾ ಅಧ್ಯಕ್ಷ ರವಿ ಸೇರಿದಂತೆ ವಿವಿಧ ಘಟಕಗಳ ಪದಾಧಿಕಾರಿಗಳು ಉಪಸ್ತಿತರಿದ್ದರು.