Kodagu

ತೊರೆನೂರು: ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

admincoorgdaily

ತೊರೆನೂರು: ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ
ತೊರೆನೂರು:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ವತಿಯಿಂದ ತೊರೆನೂರು ಗ್ರಾ.ಪಂ ವ್ಯಾಪ್ತಿಯ ಚಿಕ್ಕಅಳುವಾರದ ಶ್ರೀ ಚಿಕ್ಕಅಳುವರದಮ್ಮ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಯೋಜನಾಧಿಕಾರಿ ಹನುಮಂತಪ್ಪ ಅಂಗಡಿ, ದೇವಸ್ಥಾನ ಸಮಿತಿ ಅಧ್ಯಕ್ಷ ರಮೇಶ್, ನವಜೀವನ ಸಮಿತಿ ಅಧ್ಯಕ್ಷ ರಘು, ಮೇಲ್ವಿಚಾರಕ ಯತೀಶ್, ದೇವಸ್ಥಾನ ಸಮಿತಿ ಸದಸ್ಯರು, ನವಜೀವನ ಸಮಿತಿ ಸದಸ್ಯರು, ಶೌರ್ಯ ತಂಡದ ಸದಸ್ಯರು, ಊರಿನ ಗಣ್ಯರು, ಸೇವಾ ಪ್ರತಿನಿಧಿಗಳಾದ ಸುಮಲತಾ ಜೆ.ಬಿ, ಕಲ್ಪನಾ, ರೇಣುಕಾ, ಸ್ವಾತಿ, ಪವಿತ್ರ, ಲಕ್ಷ್ಮಿ ಮೊದಲಾದವರು ಭಾಗವಹಿಸಿದ್ದರು.