Kodagu

ಕಾವೇರಿ ತೀರ್ಥೋದ್ಭವಕ್ಕೆ ಸಾಕ್ಷಿಯಾದ ಸಾವಿರಾರು ಭಕ್ತರು

admincoorgdaily

ಕಾವೇರಿ  ತೀರ್ಥೋದ್ಭವಕ್ಕೆ ಸಾಕ್ಷಿಯಾದ ಸಾವಿರಾರು ಭಕ್ತರು
1002644791.jpg


ತಲಕಾವೇರಿ: ಕೊಡಗಿನ ಕುಲದೇವಿ, ಜೀವನದಿ ಮಾತೆ ಕಾವೇರಿಯು ಮೇಷ ಲಗ್ನದ ಶುಭ ಮುಹೂರ್ತದಲ್ಲಿ ಪವಿತ್ರ ತೀರ್ಥಕುಂಡಿಕೆಯಲ್ಲಿ ತೀರ್ಥರೂಪಿಣಿಯಾಗಿ ಭಕ್ತರಿಗೆ ದರ್ಶನ ನೀಡಿದ್ದಾಳೆ.

ವೇದಘೋಷ, ಮಂತ್ರಘೋಷಗಳ ನಡುವೆ ಕಾವೇರಿ ಮಾತೆಯ ತೀರ್ಥೋದ್ಭವ ಸಂಭವಿಸುತ್ತಿದ್ದಂತೆ 'ಜೈ ಕಾವೇರಿ ಮಾತಾ' ಎಂಬ ಭಕ್ತರ ಉದ್ಘೋಶ ಮುಗಿಲು ಮುಟ್ಟಿತು. ಸಾವಿರಾರು ಭಕ್ತಜನಸ್ತೋಮ ಈ ಪವಿತ್ರ ಕ್ಷಣಕ್ಕೆ ಸಾಕ್ಷಿಯಾಗಿ, ಪವಿತ್ರ ತೀರ್ಥೋದ್ಭವವನ್ನು ಕಣ್ತುಂಬಿಕೊಂಡು ಪುನೀತರಾದರು.

ಪವಿತ್ರ ತೀರ್ಥೋದ್ಭವ ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಪಿ.ಎಂ.ನರೇಂದ್ರ ಸ್ವಾಮಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ವಿರಾಜಪೇಟೆ ಶಾಸಕರಾದ ಎ.ಎಸ್.ಪೊನ್ನಣ್ಣ, ಮಡಿಕೇರಿ ಶಾಸಕರಾದ ಡಾ.ಮಂತರ್ ಗೌಡ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ದೇವಾಲಯ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಬಾನಂಡ ಪ್ರಥ್ಯು, ದೇವಾಲಯ ತಕ್ಕ ಮುಖ್ಯಸ್ಥರಾದ ಕೋಡಿ ಮೋಟಯ್ಯ, ಬಳ್ಳಡ್ಕ ಅಪ್ಪಾಜಿ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಅಜ್ಜಿನಿಕಂಡ ಮಹೇಶ್ ನಾಚಯ್ಯ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ, ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ, ಹೆಚ್ಚುವರಿ ಜಿಲ್ಲಾಧಿಕಾರಿ ನಿರಂಜನ, ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ವಿಧಾನ ಪರಿಷತ್ ಮಾಜಿ ಸದಸ್ಯರಾದ ವೀಣಾ ಅಚ್ಚಯ್ಯ, ಪ್ರಮುಖರಾದ ಕೆ.ಪಿ.ಚಂದ್ರಕಲಾ, ಕಾಂಚನ್ ಪೊನ್ನಣ್ಣ, ದೇವಾಲಯ ಇಒ ಚಂದ್ರಶೇಖರ್, ತಹಶಿಲ್ದಾರರು ಸೇರಿದಂತೆ ಇತರ ಗಣ್ಯರು ಪಾಲ್ಗೊಂಡಿದ್ದರು.