Kodagu

ಮಂಗಳೂರು ವಲಯದ ಅಂಡರ್-15 ಮಹಿಳಾ ಕ್ರಿಕೆಟ್ ತಂಡಕ್ಕೆ ಪ್ರಗತಿ ಶಾಲೆಯ ಮೂವರು ವಿದ್ಯಾರ್ಥಿನಿಯರ ಆಯ್ಕೆ

admincoorgdaily

ಮಂಗಳೂರು ವಲಯದ ಅಂಡರ್-15 ಮಹಿಳಾ ಕ್ರಿಕೆಟ್ ತಂಡಕ್ಕೆ ಪ್ರಗತಿ ಶಾಲೆಯ ಮೂವರು ವಿದ್ಯಾರ್ಥಿನಿಯರ ಆಯ್ಕೆ
ವಿರಾಜಪೇಟೆ: ವಿರಾಜಪೇಟೆಯ ಪ್ರಗತಿ ನರ್ಸರಿ, ಪ್ರಾಥಮಿಕ ಮತ್ತು ಪ್ರೌಢಶಾಲೆಯ ವಿದ್ಯಾರ್ಥಿನಿಯರಾದ ವಿನಯ ವಿ.ಎಸ್., ಪ್ರೇಕ್ಷಾ ಹಾಗೂ ವರ್ಷಿಣಿ ಅವರು ಅಂಡರ್-15 ಮಂಗಳೂರು ವಲಯದ ಮಹಿಳಾ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗುವ ಮೂಲಕ ಶಾಲೆಗೆ ಹಾಗೂ ಕೊಡಗು ಜಿಲ್ಲೆಗೆ ಹೆಮ್ಮೆ ತಂದಿದ್ದಾರೆ.

  ಆಯ್ಕೆಯಾದ ಈ ಮೂವರು ಪ್ರತಿಭಾವಂತ ಆಟಗಾರ್ತಿಯರು ಬೆಂಗಳೂರಿನ ಪ್ರತಿಷ್ಠಿತ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಅಂತರ್ ವಲಯ ಕ್ರಿಕೆಟ್ ಚಾಂಪಿಯನ್‌ಶಿಪ್‌ನಲ್ಲಿ ಮಂಗಳೂರು ವಲಯವನ್ನು ಪ್ರತಿನಿಧಿಸಲಿದ್ದಾರೆ.

   ವಿದ್ಯಾರ್ಥಿಗಳಲ್ಲಿರುವ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಸೂಕ್ತ ತರಬೇತಿ ಹಾಗೂ ಪ್ರೋತ್ಸಾಹ ನೀಡುವಲ್ಲಿ ಪ್ರಗತಿ ಶಾಲೆ ನಿರಂತರವಾಗಿ ಶ್ರಮಿಸುತ್ತಿದೆ. ಈ ಮೂವರು ವಿದ್ಯಾರ್ಥಿನಿಯರ ಆಯ್ಕೆ ಶಾಲೆಯ ಕ್ರೀಡಾ ಸಾಧನೆಗೆ ಮತ್ತೊಂದು ಗರಿ ಮೂಡಿಸಿದೆ.
   ವಿದ್ಯಾರ್ಥಿನಿಯರ ಈ ಸಾಧನೆಗೆ ಶಾಲೆಯ ಆಡಳಿತ ಮಂಡಳಿ, ಶಿಕ್ಷಕ ವೃಂದ ಹಾಗೂ ಕ್ರೀಡಾ ತರಬೇತುದಾರರು ಮುಂಬರುವ ಚಾಂಪಿಯನ್‌ಶಿಪ್‌ನಲ್ಲಿ ಉತ್ತಮ ಪ್ರದರ್ಶನ ನೀಡಿ ತಂಡಕ್ಕೆ ಕೀರ್ತಿ ತರಲಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.