Kodagu

ಮುಗುಟಗೇರಿಯಲ್ಲಿ ಹುಲಿ ಹೆಜ್ಜೆ ಗುರುತು ಪತ್ತೆ: ಗ್ರಾಮಸ್ಥರಲ್ಲಿ ಆತಂಕ

admincoorgdaily

ಮುಗುಟಗೇರಿಯಲ್ಲಿ ಹುಲಿ ಹೆಜ್ಜೆ ಗುರುತು ಪತ್ತೆ: ಗ್ರಾಮಸ್ಥರಲ್ಲಿ ಆತಂಕ
ಪೊನ್ನಂಪೇಟೆ, ನ 10: ತಾಲೂಕಿನ ಮುಗುಟಗೇರಿ ಗ್ರಾಮದಲ್ಲಿ ಹುಲಿಯ ಹೆಜ್ಜೆ ಗುರುತು ಪತ್ತೆಯಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.

ಕಳೆದ ರಾತ್ರಿ ಸ್ಥಳೀಯ ನಿವಾಸಿ ಮುದ್ದಿಯಡ ಗಣೇಶ್ ಅವರ ಮನೆಯ ಸಮೀಪದ ಗದ್ದೆಯಲ್ಲಿ ಹುಲಿ ಸಂಚರಿಸಿರುವ ಹೆಜ್ಜೆ ಗುರುತುಗಳು ಪತ್ತೆಯಾಗಿವೆ.

ಕೂಡಲೇ ಅರಣ್ಯ ಇಲಾಖೆಯ ಡಿಆರ್‌ಎಫ್‌ಒ ದಿವಾಕರ್ ಅವರಿಗೆ ಮಾಹಿತಿ ನೀಡಲಾಗಿದ್ದು, ಸ್ಥಳಕ್ಕೆ ಆಗಮಿಸಿದ ಅವರು ಪರಿಶೀಲನೆ ನಡೆಸಿ ಹುಲಿಯ ಹೆಜ್ಜೆ ಗುರುತುಗಳನ್ನು ಖಚಿತಪಡಿಸಿದ್ದಾರೆ. ಅಲ್ಲದೆ, ಸುತ್ತಮುತ್ತಲಿನ ಗ್ರಾಮಸ್ಥರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದ್ದಾರೆ. ಇತ್ತೀಚೆಗೆ ದಕ್ಷಿಣ ಕೊಡಗಿನ ಬೆಳ್ಳೂರಿನಲ್ಲಿ ಹುಲಿಯ ನಿರಂತರ ದಾಳಿಯಿಂದ ಹಸುಗಳು ಬಲಿಯಾಗುತ್ತಿದ್ದು ರೈತರು ಪ್ರತಿಭಟನೆ ನಡೆಸಿದ್ದಾರೆ. 

ಬೆಳ್ಳೂರಿನಲ್ಲಿ ಕಾರ್ಯಾಚರಣೆ ಪ್ರಗತಿಯಲ್ಲಿದ್ದು ಈಗ ಸುತ್ತಮುತ್ತಲಿನ ಗ್ರಾಮಗಳಲ್ಲಿ ಹುಲಿ ಸಂಚರಿಸುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಅರಣ್ಯ ಇಲಾಖೆಯವರು ಕೂಡಲೇ ಕಾರ್ಯಾಚರಣೆ ನಡೆಸಿ ಹೆಚ್ಚಿನ ಅನಾಹುತ ಸಂಭವಿಸುವ ಮೊದಲು ಹುಲಿಯನ್ನು ಸೆರೆ ಹಿಡಿಯಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ಈ ಸಂದರ್ಭ ಮಾತನಾಡಿದ ದಿವಾಕರ್ ಹುಲಿಯ ಚಲನವಲನಗಳನ್ನು ಗಮನಿಸಲಾಗುತ್ತಿದ್ದು ಅದರ ಹೆಜ್ಜೆಯ ಜಾಡನ್ನು ಹಿಡಿದು ಪರಿಶೀಲಿಸಲಾಗುತ್ತಿದೆ, ಅದರ ಇರುವಿಕೆಯ ಖಚಿತ ಜಾಗವನ್ನು ಗುರುತಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ವರದಿ; ಚಂಗು ಚೀರಂಡ