ಮಾಲ್ದಾರೆ ಸುತ್ತಮುತ್ತ ಹುಲಿ ಸಂಚಾರ ಗ್ರಾಮಸ್ಥರಿಗೆ ಎಚ್ಚರಿಕೆ
admincoorgdaily

ಸಿದ್ದಾಪುರ:-ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಗ್ರಾಮದ ಚಂಗಪ್ಪ ಕಾಫಿ ತೋಟದ ಸುತ್ತಮುತ್ತ ಹುಲಿ ಸಂಚಾರದ ಸುಳಿವು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಗ್ರಾಮಸ್ಥರಿಗೆ ಎಚ್ಚರಿಕೆ ವಹಿಸುವಂತೆ ಸೂಚಿಸಿದೆ.
ಚಂಗಪ್ಪ ಅವರ ಕಾಫಿ ತೋಟದಲ್ಲಿ ಹುಲಿಯ ಹೆಜ್ಜೆ ಗುರುತು ಪತ್ತೆಯಾಗಿದ್ದು ಈ ಹಿನ್ನೆಲೆಯಲ್ಲಿ ಮಾಲ್ದಾರೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಗ್ರಾಮಸ್ಥರು ಎಚ್ಚರಿಕೆಯಿಂದ ಇರುವಂತೆ ಕರ್ನಾಟಕ ಅರಣ್ಯ ಇಲಾಖೆ ತಿಳಿಸಿದೆ ಕಾಫಿ ತೋಟಗಳಿಗೆ ಒಂಟಿಯಾಗಿ ತೆರಳದಂತೆ ಹಾಗೂ ರಾತ್ರಿ ವೇಳೆ ಅನಗತ್ಯವಾಗಿ ಸಂಚರಿಸದಂತೆ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಹುಲಿ ಕಂಡುಬಂದಲ್ಲಿ ಅದರ ಸಮೀಪ ತೆರಳದೆ ಗುಂಪುಗೂಡಿ ಹಿಂಬಾಲಿಸದೆ ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ.
ಹುಲಿ ಅಥವಾ ಅದರ ಹೆಜ್ಜೆ ಗುರುತು ಕಂಡುಬಂದಲ್ಲಿ ಅರಣ್ಯ ಇಲಾಖೆಯ ಸಹಾಯವಾಣಿ 8277124444ಕ್ಕೆ ಕರೆ ಮಾಡಿ ಮಾಹಿತಿ ನೀಡುವಂತೆ ಇಲಾಖೆಯು ಕೋರಿದೆ.