Kodagu

ರಾಜ್ಯ ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ಹುಲಿ ಪ್ರತ್ಯಕ್ಷ; ಅರಣ್ಯ ಇಲಾಖೆಯಿಂದ ಕಾರ್ಯಾಚರಣೆ

admincoorgdaily

ರಾಜ್ಯ ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ಹುಲಿ ಪ್ರತ್ಯಕ್ಷ; ಅರಣ್ಯ ಇಲಾಖೆಯಿಂದ ಕಾರ್ಯಾಚರಣೆ
ವಿರಾಜಪೇಟೆ, ಸೆ.09: ವಿರಾಜಪೇಟೆ-ಗೋಣಿಕೊಪ್ಪ ಮುಖ್ಯ ರಸ್ತೆಯ ಕೊಳತೊಡು ರಾಜ್ಯ ಹೆದ್ದಾರಿಯಲ್ಲಿ ಇಂದು ಮುಂಜಾನೆ ಹುಲಿ ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ಹುಲಿ ಕಾಣಿಸಿಕೊಂಡ ಬೆನ್ನಲ್ಲೇ ಅರಣ್ಯ ಇಲಾಖೆ ಎಚ್ಚೆತ್ತುಕೊಂಡಿದ್ದು, ಕೆ.ಬೈಗೋಡು ಗ್ರಾಮದ ಸುತ್ತಮುತ್ತ ಜಂಟಿ ಕಾರ್ಯಾಚರಣೆ ಆರಂಭಿಸಿದೆ.

ವಿರಾಜಪೇಟೆ ಮತ್ತು ಅಮ್ಮತ್ತಿ ವಲಯದ ಅರಣ್ಯ ತಂಡಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿವೆ. ಡಿಆರ್‌ಎಫ್‌ಒ ಮನೋಜ್, ಡಿಆರ್‌ಎಫ್‌ಒ ಪ್ರಶಾಂತ್ ನೇತೃತ್ವದಲ್ಲಿ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ.

ಮುಂಜಾನೆ ರಸ್ತೆ ದಾಟಿದ ಹುಲಿ ಸಮೀಪದ ಕಾಫಿ ತೋಟದತ್ತ ತೆರಳಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಅರಣ್ಯ ಇಲಾಖೆ ಸ್ಥಳದಲ್ಲಿ ಬೋನ್ ಹಾಗೂ ಕ್ಯಾಮೆರಾ ಅಳವಡಿಸುವ ಕಾರ್ಯ ಆರಂಭಿಸಿದೆ.