Kodagu

ಕೊಡಗು ಕಾಂಗ್ರೆಸ್ ಅಧ್ಯಕ್ಷರಾಗಿ ತಿತೀರ ಧರ್ಮಜ ಉತ್ತಪ್ಪ ಮುಂದುವರಿಕೆ; ಜಿಲ್ಲಾ ಅಧ್ಯಕ್ಷರ ನೇಮಕಕ್ಕೆ ಹೈಕಮಾಂಡ್ ಅಸ್ತು

admincoorgdaily

ಕೊಡಗು ಕಾಂಗ್ರೆಸ್ ಅಧ್ಯಕ್ಷರಾಗಿ ತಿತೀರ ಧರ್ಮಜ ಉತ್ತಪ್ಪ ಮುಂದುವರಿಕೆ; ಜಿಲ್ಲಾ ಅಧ್ಯಕ್ಷರ ನೇಮಕಕ್ಕೆ ಹೈಕಮಾಂಡ್ ಅಸ್ತು
ಮಡಿಕೇರ: ಕರ್ನಾಟಕದ ಜಿಲ್ಲಾ ಕಾಂಗ್ರೆಸ್ ಸಮಿತಿಗಳ ಅಧ್ಯಕ್ಷರ ನೇಮಕಕ್ಕೆ ಎಐಸಿಸಿ ಹೈಕಮಾಂಡ್ ಅನುಮೋದನೆ ನೀಡಿದೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಸೆಪ್ಟೆಂಬರ್ 09, 2026 ರಂದು ಈ ಕುರಿತು ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ. ಕಾಂಗ್ರೆಸ್ ಅಧ್ಯಕ್ಷರ ಅನುಮೋದನೆಯೊಂದಿಗೆ ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಂಘಟನಾ ಸೃಜನ್ ಅಭಿಯಾನದ ಅಡಿಯಲ್ಲಿ ನೇಮಕಗೊಂಡಿದ್ದ ಎಐಸಿಸಿ ವೀಕ್ಷಕರು ಪ್ರತಿ ಜಿಲ್ಲೆಯಲ್ಲಿ ಪಕ್ಷದ ಪದಾಧಿಕಾರಿಗಳು, ಮುಖಂಡರೊಂದಿಗೆ ಸಭೆ ನಡೆಸಿ ಸಲ್ಲಿಸಿದ ಸಮಗ್ರ ವರದಿ ಮತ್ತು ಹಿರಿಯ ನಾಯಕರೊಂದಿಗಿನ ಚರ್ಚೆಯ ಆಧಾರದ ಮೇಲೆ ಈ ನೇಮಕ ನಡೆದಿದೆ.

ಈ ಪಟ್ಟಿಯಲ್ಲಿ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಹಾಲಿ ಅಧ್ಯಕ್ಷ ತಿತೀರ ಧರ್ಮಜ ಉತ್ತಪ್ಪ ಅವರನ್ನೇ ಮುಂದುವರಿಸಿದ್ದಾರೆ.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ 15 ಕ್ಕೂ ಹೆಚ್ಚು ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದರು.
ಧರ್ಮಜ ಉತ್ತಪ್ಪ ಅವರ ಮುಂದುವರಿಕೆಗೆ ಜಿಲ್ಲಾ ಕಾಂಗ್ರೆಸ್ ವಲಯದಲ್ಲಿ ಸ್ವಾಗತ ವ್ಯಕ್ತವಾಗಿದೆ.