ನಾಳೆ ಸೋಮವಾರಪೇಟೆ ಕಾರ್ಯನಿರತ ಪತ್ರಕರ್ತರ ಸಂಘದಿಂದ ನೇರುಗಳಲೆ ಪ್ರೌಢಶಾಲೆಯಲ್ಲಿ ಪತ್ರಿಕಾ ದಿನಾಚರಣೆ

ಸೋಮವಾರಪೇಟೆ:ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಫ, ಸೋಮವಾರಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆಯನ್ನು ನೇರುಗಳಲೆ ಪ್ರೌಢ ಶಾಲಾ ಆವರಣದಲ್ಲಿ ನಾಳೆ ಶನಿವಾರ ಬೆಳಗ್ಗೆ 10-30ಗಂಟೆಗೆ ಸೋಮವಾರಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶಕ ಹಿರಿಕರ ರವಿಯವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಸೋಮವಾರಪೇಟೆ ಭುವನ ಮಂದಾರ ರೈತ ಉತ್ಪಾದಕರ ಸಂಸ್ಥೆ ಹಾಗೂ ಸೋಮವಾರಪೇಟೆ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷರಾದ ಎಸ್. ಎಂ ಡಿಸಿಲ್ವ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಸವಿತಾ ರೈ, ನೇರುಗಳಲೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಿನೋದ್ ಕುಮಾರ್, ನೇರುಗಳಲೆ ಪ್ರೌಢ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ರವಿಕುಮಾರ್, ನೇರುಗಳಲೆ ಪ್ರೌಢ ಶಾಲಾ ಮುಖ್ಯ ಶಿಕ್ಷಕಿ ರಾಜೇಶ್ವರಿ, ಸೋಮವಾರಪೇಟೆ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ವಿಜಯ್ ಹಾನಗಲ್, ಉಪಾಧ್ಯಕ್ಷ ವಿಶ್ವ ಕುಂಬೂರು, ಪ್ರಧಾನ ಕಾರ್ಯದರ್ಶಿ ದಿನೇಶ್ ಮಾಲಂಬಿ, ಖಜಾಂಜಿ ಭಾಸ್ಕರ್. ಬಿ. ಎ, ಜಂಟಿ ಕಾರ್ಯದರ್ಶಿ ಲಕ್ಷ್ಮಿ ಕಾಂತ್ ಕೋಮರಪ್ಪ, ನಿರ್ದೇಶಕರಾದ ವಿಜೇತ್, ಚೇರಿಯಮನೆ ಸುರೇಶ್, ಭಾಸ್ಕರ್ ಮುಳ್ಳೂರು, ಇಂದ್ರೇಶ್ ಮುಂತಾದವರು ಪಾಲ್ಗೊಳ್ಳಲಿದ್ದಾರೆ ಎಂದು ಸೋಮವಾರಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪ್ರಕಟಣೆಯಲ್ಲಿ ತಿಳಿಸಿದೆ.