Kodagu

ಕಾರ್ಮಿಕರಿಗೆ ಕೂಲಿ ಕೊಟ್ಟು ಮರಳುತ್ತಿದ್ದಾಗ ದುರಂತ: ಲಾರಿ ಅಪಘಾತದಲ್ಲಿ ಸಾವು

admincoorgdaily

ಬಸಪ್ಪ
ಕುಶಾಲನಗರ: ಪಿರಿಯಾಪಟ್ಟಣ-ಕುಶಾಲನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಸಂಜೆ ನಡೆದ ರಸ್ತೆ ಅಪಘಾತದಲ್ಲಿ ತಾವರೆಕೆರೆ ನಿವಾಸಿ ಬಸಪ್ಪ (66) ಅವರು ಮೃತಪಟ್ಟಿದ್ದಾರೆ.

ತಮ್ಮ ಮಾಯಮುಡಿ ತೋಟಕ್ಕೆ ತೆರಳಿ ಕಾರ್ಮಿಕರಿಗೆ ವೇತನ ನೀಡಿ ವಾಪಸ್ಸಾಗುತ್ತಿದ್ದ ವೇಳೆ ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಲಾರಿಯ ಚಕ್ರಕ್ಕೆ ಸಿಲುಕಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರ ಪಾರ್ಥಿವ ಶರೀರ ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿದ್ದು, ಇಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ತಾವರೆಕೆರೆಗೆ ತರಲಾಗುವುದು. ಅಂತ್ಯಕ್ರಿಯೆ ಗುರುವಾರ ಸಂಜೆ ತಾವರೆಕೆರೆ ತೋಟದಲ್ಲಿ ನಡೆಯಲಿದೆ.

ಮೃತರು ಪತ್ನಿ ಹಾಗೂ ಪಾಲಿಟೆಕ್ನಿಕ್ ಕಾಲೇಜಿನ ಗೌರವ ಉಪನ್ಯಾಸಕ ಪುತ್ರ ಆಕಾಶ್ ಅವರನ್ನು ಅಗಲಿದ್ದಾರೆ.

ಅವರ ನಿಧನಕ್ಕೆ ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷ ಎಚ್.ವಿ.ಶಿವಪ್ಪ, ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಸ್.ಮೂರ್ತಿ, ಬಸವೇಶ್ವರ ಬ್ಯಾಂಕ್ ಅಧ್ಯಕ್ಷ ಶಾಂಭುಶಿವಯ್ಯ ಸೇರಿದಂತೆ ಹಲವರು ಸಂತಾಪ ವ್ಯಕ್ತಪಡಿಸಿದ್ದಾರೆ.