ಭಾರಿ ಗಾಳಿ ಮಳೆಗೆ ಪಿಕಪ್ ಮೇಲೆ ಬಿದ್ದ ಮರ - ಕೂದಲೆಳೆಯ ಅಂತರದಲ್ಲಿ ಪಾರಾದ ಚಾಲಕ
admincoorgdaily

ಕುಶಾಲನಗರ:ಇಂದು ಸುರಿದ ಭಾರಿ ಗಾಳಿ ಮಳೆಗೆ ಕೂಡುಮಂಗಳೂರು ದೊಡ್ಡಮ್ಮತಾಯಿ ದೇವಾಲಯದ ಬಳಿ ರಸ್ತೆ ಬದಿಯ ಬೃಹತ್ ಮರವೊಂದು ಪಿಕಪ್ ವಾಹನದ ಮೇಲೆ ಬಿದ್ದಿದೆ.
ಅದೃಷ್ಟವಶಾತ್ ಚಾಲಕ ಕೂದಲೆಳೆಯ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮರ ಬೀಳುವ ರಭಸಕ್ಕೆ ಪಿಕಪ್ ವಾಹನ ಜಖಂಗೊಂಡಿದ್ದು, ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಸ್ಥಳೀಯರು ಕೂಡಲೇ ಆಗಮಿಸಿ ರಕ್ಷಣಾ ಕಾರ್ಯ ನಡೆಸಿದ್ದಾರೆ.