ಧರ್ಮಜ ಉತ್ತಪ್ಪರಿಗೆ ಸನ್ಮಾನ : 2028ರಲ್ಲೂ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಖಚಿತ : ಕೆ.ಜಿ.ಪೀಟರ್ ವಿಶ್ವಾಸ
admincoorgdaily

ಮಡಿಕೇರಿ ಸೆ.29 : ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಧರ್ಮಜ ಉತ್ತಪ್ಪ ಅವರ ನೇತೃತ್ವದಲ್ಲಿ 2023 ರಲ್ಲಿ ಕೊಡಗು ಜಿಲ್ಲೆಯ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದಂತೆ 2028 ರಲ್ಲೂ ಎರಡೂ ಕ್ಷೇತ್ರಗಳು ಕಾಂಗ್ರೆಸ್ ಪಾಲಾಗಲಿದೆ ಎಂದು ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಕೆ.ಜಿ.ಪೀಟರ್ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ವತಿಯಿಂದ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಎರಡನೇ ಬಾರಿಗೆ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಧರ್ಮಜ ಉತ್ತಪ್ಪ ಅವರ ಸನ್ಮಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಧರ್ಮಜ ಉತ್ತಪ್ಪ ಅವರು ಅತ್ಯಂತ ಸ್ನೇಹಜೀವಿಯಾಗಿದ್ದು, ಪಕ್ಷ ಸಂಘಟನೆಯ ರೀತಿ ಅಭೂತವಾಗಿದೆ. ಎಲ್ಲಾ ಪದಾಧಿಕಾರಿಗಳನ್ನು ಹಾಗೂ ಕಾರ್ಯಕರ್ತರನ್ನು ವಿಶ್ವಾಸದಿಂದ ಕಂಡು ಪಕ್ಷ ಕಟ್ಟಿದ ಫಲವಾಗಿ ಬಿಜೆಪಿ ಭದ್ರಕೋಟೆ ಎನಿಸಿಕೊಂಡಿದ್ದ ಕೊಡಗಿನ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲು ಸಾಧ್ಯವಾಯಿತು. ಇದೀಗ ಮತ್ತೊಮ್ಮೆ ಎರಡನೇ ಬಾರಿಗೆ ಜಿಲ್ಲಾಧ್ಯಕ್ಷ ಸ್ಥಾನ ಲಭಿಸಿದ್ದು, ಹೈಕಮಾಂಡ್ ನಿರ್ಧಾರ ಸರಿಯಾಗಿದೆ. ಧರ್ಮಜ ಉತ್ತಪ್ಪ ಅವರ ನೇತೃತ್ವದಲ್ಲಿ 2028 ರ ವಿಧಾನಸಭಾ ಚುನಾವಣೆಯಲ್ಲಿ ಮಡಿಕೇರಿ ಮತ್ತು ವಿರಾಜಪೇಟೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ನಿಶ್ಚಿತವಾಗಿದೆ ಎಂದು ಕೆ.ಜಿ.ಪೀಟರ್ ತಿಳಿಸಿದರು.
ನಂತರ ಅವರು ಧರ್ಮಜ ಉತ್ತಪ್ಪ ಅವರನ್ನು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಿದರು.
ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷರಾದ ಹಬೀಬ್, ಹಫೀಜ್, ನಗರಾಧ್ಯಕ್ಷ ಕೌಸರ್, ಕಾಂಗ್ರೆಸ್ ನಗರಾಧ್ಯಕ್ಷ ಪ್ರಕಾಶ್ ಆಚಾರ್ಯ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಆರ್.ಪಿ.ಚಂದ್ರಶೇಖರ್, ನಗರಸಭಾ ಮಾಜಿ ಅಧ್ಯಕ್ಷೆ ಜುಲೇಕಾಬಿ, ಮಾಜಿ ಉಪಾಧ್ಯಕ್ಷೆ ಲೀಲಾ ಶೇಷಮ್ಮ, ಡಿಸಿಸಿ ಸದಸ್ಯ ಕಲೀಲ್ ಬಾಷಾ, ಪ್ರಮುಖರಾದ ಮುನೀರ್ ಮಾಚರ್, ಜಗದೀಶ್, ಪಿಯೂಷ್ ಪೆರೇರ, ಹುಸೇನ್, ಹಫೀಜ್, ಕವನ್, ಚರಣ್, ಅರ್ಜುನ್, ವಸಂತ್, ರಾಜು, ನಗರ ಮಹಿಳಾ ಘಟಕದ ಅಧ್ಯಕ್ಷೆ ಶಶಿ ಮತ್ತಿತರ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.