Kodagu

ಅಪ್ಪಚ್ಚಕವಿ ವಿದ್ಯಾಲಯದ ಇಬ್ಬರು ವಿದ್ಯಾರ್ಥಿಗಳು ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

admincoorgdaily

ಅಪ್ಪಚ್ಚಕವಿ ವಿದ್ಯಾಲಯದ ಇಬ್ಬರು ವಿದ್ಯಾರ್ಥಿಗಳು ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ
ಪೊನ್ನಂಪೇಟೆ,ಅ 28: ಮಡಿಕೇರಿಯಲ್ಲಿ ಇತ್ತೀಚೆಗೆ ನಡೆದ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಪೊನ್ನಂಪೇಟೆಯ ಅಪ್ಪಚ್ಚಕವಿ ವಿದ್ಯಾಲಯದ ಇಬ್ಬರು ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡುವ ಮೂಲಕ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ವಿದ್ಯಾಲಯದ 8ನೇ ತರಗತಿಯ ವಿದ್ಯಾರ್ಥಿ ಕಾಳಿಮಾಡ ವರುಣ್ ಅವರ ಪುತ್ರ ಕೆ.ಧ್ಯಾನ್ ಬೋಪಣ್ಣ ಅವರು ಶಾಟ್‌ಪುಟ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ ಡಿಸ್ಕಸ್ ಥ್ರೋ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ. 9ನೇ ತರಗತಿಯ ವಿದ್ಯಾರ್ಥಿನಿ ಪೊನ್ನಂಪೇಟೆಯ ಭಾರತ್ ಅವರ ಪುತ್ರಿ ಎಚ್.ಬಿ ಗಗನ ಅವರು ಹರ್ಡಲ್ಸ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸುವ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗಳ ಈ ಸಾಧನೆಗೆ ವಿದ್ಯಾಲಯದ ಆಡಳಿತ ಮಂಡಳಿ, ಮುಖ್ಯಶಿಕ್ಷಕರು ಹಾಗೂ ಶಿಕ್ಷಕ ವೃಂದ ಅಭಿನಂದನೆ ಸಲ್ಲಿಸಿದ್ದು, ರಾಜ್ಯಮಟ್ಟದ ಸ್ಪರ್ಧೆಗಳಲ್ಲಿಯೂ ಉತ್ತಮ ಪ್ರದರ್ಶನ ನೀಡಿ ಯಶಸ್ಸು ಗಳಿಸುವಂತೆ ಶುಭ ಹಾರೈಸಿದ್ದಾರೆ.