Kodagu

ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಕ್ರೀಡಾಕೂಟ: ನಾಪೋಕ್ಲು ಕೆಪಿಎಸ್ ಶಾಲೆಯ ಲಿಖಿತ ಜಿಲ್ಲಾಮಟ್ಟಕ್ಕೆ ಆಯ್ಕೆ

admincoorgdaily

ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಕ್ರೀಡಾಕೂಟ: ನಾಪೋಕ್ಲು ಕೆಪಿಎಸ್ ಶಾಲೆಯ ಲಿಖಿತ ಜಿಲ್ಲಾಮಟ್ಟಕ್ಕೆ ಆಯ್ಕೆ
ನಾಪೋಕ್ಲು: ಶಾಲಾ ಶಿಕ್ಷಣ ಇಲಾಖೆ ಕೊಡಗು ಜಿಲ್ಲೆ ಹಾಗೂ ಸಂತ ಮೈಕಲರ ಪದವಿ ಪೂರ್ವ ಕಾಲೇಜು ಮಡಿಕೇರಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ತಾಲ್ಲೂಕು ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ನಾಪೋಕ್ಲು ಕರ್ನಾಟಕ ಪಬ್ಲಿಕ್ ಶಾಲೆಯ ಪದವಿ ಪೂರ್ವ ಕಾಲೇಜು ವಿಭಾಗದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಎ. ಟಿ.ಲಿಖಿತ  800 ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾಳೆ. ವಿದ್ಯಾರ್ಥಿನಿಯ ಸಾಧನೆಗೆ ಶಾಲೆಯ ಮೇಲುಸ್ತುವಾರಿ ಸಮಿತಿ ಹಾಗೂ ಉಪನ್ಯಾಸಕ ವೃಂದ ಅಭಿನಂದನೆ ಸಲ್ಲಿಸಿದ್ದಾರೆ.

ವರದಿ :ಝಕರಿಯ ನಾಪೋಕ್ಲು