ಭಾನುವಾರ ಕೊಡಗಿಗೆ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಆಗಮನ
admincoorgdaily


ಮಡಿಕೇರಿ: ಜೆಡಿಎಸ್ ರಾಜ್ಯಾಧ್ಯಕ್ಷರು ಹಾಗೂ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಎಚ್.ಡಿ.ಕುಮಾರಸ್ವಾಮಿ ಅವರು ಇದೇ ಭಾನುವಾರ ನ.22ರಂದು ಕೊಡಗು ಜಿಲ್ಲೆಗೆ ಆಗಮಿಸಲಿದ್ದಾರೆ ಎಂದು ಜಿಲ್ಲಾ ಯುವ ಜೆಡಿಎಸ್ ಅಧ್ಯಕ್ಷ ಸಿ.ಎಲ್.ವಿಶ್ವ ತಿಳಿಸಿದ್ದಾರೆ.
ಅಂದು ಸೋಮವಾರಪೇಟೆಯ ಖಾಸಗಿ ಸಭಾಂಗಣದಲ್ಲಿ ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಜಿಲ್ಲಾ ಜೆಡಿಎಸ್ ಮುಖಂಡರ ಸಭೆ ನಡೆಯಲಿದೆ. ಜಿಲ್ಲಾ ಹಾಗೂ ತಾಲೂಕು ಸಮಿತಿಯ ಎಲ್ಲಾ ಪದಾಧಿಕಾರಿಗಳು ಸಭೆಯಲ್ಲಿ ಪಾಲ್ಗೊಳ್ಳಬೇಕೆಂದು ಮನವಿ ಮಾಡಿದ್ದಾರೆ.
ಸಭೆಯ ನಂತರ ರೈತ ಸಂಘಟನೆಯ ಸಮ್ಮುಖದಲ್ಲಿ ಕೊಡಗಿಗೆ ಮಾರಕವಾಗಿರುವ ಸಿ.ಎನ್.ಡಿ ಲ್ಯಾಂಡ್, ಸೆಕ್ಷನ್-4 ಹಾಗೂ ಕಸ್ತೂರಿ ರಂಗನ್ ವಿಷಯವಾಗಿ ಸೋಮವಾರಪೇಟೆ ಜೂನಿಯರ್ ಕಾಲೇಜು ಮೈದಾನದಲ್ಲಿ ಸಾರ್ವಜನಿಕ ಸಭೆ ಹಮ್ಮಿಕೊಳ್ಳಲಾಗಿದೆ. ಇದೇ ಸಂದರ್ಭದಲ್ಲಿ ಹರಪಳ್ಳಿ ರವೀಂದ್ರ ಅವರ ಕೃತಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿಯೂ ಕುಮಾರಸ್ವಾಮಿ ಭಾಗಿಯಾಗಲಿದ್ದಾರೆ ಎಂದು ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಯುವ ಜೆಡಿಎಸ್ ಉಪಾಧ್ಯಕ್ಷ ಸ್ವಾಗತ್, ಕಾರ್ಯದರ್ಶಿ ಸತ್ಯ, ಮಡಿಕೇರಿ ತಾಲೂಕು ಅಧ್ಯಕ್ಷ ಎನ್.ರವಿಕಿರಣ್, ವಿರಾಜಪೇಟೆ ತಾಲೂಕು ಅಧ್ಯಕ್ಷ ಪಿ.ಎ.ಮಂಜುನಾಥ್, ಜಿಲ್ಲಾ ಹಿಂದುಳಿದ ವರ್ಗದ ಅಧ್ಯಕ್ಷ ಶಿವದಾಸ್ ಉಪಸ್ಥಿತರಿದ್ದರು.