Kodagu

ವಾಲ್ನೂರು-ತ್ಯಾಗತ್ತೂರು ಜಿಲ್ಲಾ ಪಂಚಾಯತ್ ಕ್ಷೇತ್ರ; ಕಾಂಗ್ರೆಸ್ ನಲ್ಲಿ ಸ್ಥಳೀಯರಿಗೆ ಟಿಕೆಟ್ ನೀಡಲು ಒತ್ತಾಯ

admincoorgdaily

ವಾಲ್ನೂರು-ತ್ಯಾಗತ್ತೂರು ಜಿಲ್ಲಾ ಪಂಚಾಯತ್ ಕ್ಷೇತ್ರ; ಕಾಂಗ್ರೆಸ್  ನಲ್ಲಿ ಸ್ಥಳೀಯರಿಗೆ ಟಿಕೆಟ್ ನೀಡಲು ಒತ್ತಾಯ
ಮಡಿಕೇರಿ: ವಾಲ್ನೂರು-ತ್ಯಾಗತ್ತೂರು ಜಿಲ್ಲಾ ಪಂಚಾಯತ್ ಕ್ಷೇತ್ರದಲ್ಲಿ ಕಾಂಗ್ರೆಸ್ ‌ಪಕ್ಷದಿಂದ ಸ್ಥಳೀಯ ಅಭ್ಯರ್ಥಿಗಳಿಗೆ ಟಿಕೆಟ್ ನೀಡಬೇಕೆಂಬ ಒತ್ತಾಯ ಕೇಳಿ ಬಂದಿದೆ.ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲು ಅರ್ಹ ಅಭ್ಯರ್ಥಿಗಳಿದ್ದು,ಹೊರಗಿನ ವ್ಯಕ್ತಿಗಳಿಗೆ ಕಾಂಗ್ರೆಸ್ ಟಿಕೆಟ್ ನೀಡಬಾರದೆಂಬ ಒತ್ತಾಯ ಕೇಳಿ ಬಂದಿದೆ.

ಕಾಂಗ್ರೆಸ್ ಪಕ್ಷದಲ್ಲಿ ಸ್ಥಳೀಯರಾದ ಹಕೀಂ,ಕೆ.ಎಂ‌ ಬಶೀರ್ ಹಾಗೂ ಸುನಿತಾ ಮಂಜುನಾಥ್ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ.ಈ ಮೂವರು ಕ್ಷೇತ್ರದವರೇ ಆಗಿದ್ದಾರೆ.ಹೊರಗಿನ ವ್ಯಕ್ತಿಗಳಿಗೆ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡಿದರೆ ಸೋಲು ಖಚಿತ ಎಂಬ ಅಭಿಪ್ರಾಯ ಕ್ಷೇತ್ರದಲ್ಲಿ ವ್ಯಕ್ತವಾಗಿದೆ.