ವಿರಾಜಪೇಟೆ:ಪರಿಶಿಷ್ಟ ಜಾತಿ- ಪರಿಶಿಷ್ಟ ಪಂಗಡ ಜನಾಂಗದವರಿಗೆ ವಸತಿ ಕಲ್ಪಿಸುವ ವಿಶೇಷ ಯೋಜನೆಯ ಕುರಿತು ಎ.ಎಸ್ ಪೊನ್ನಣ್ಣ ನೇತೃತ್ವದಲ್ಲಿ ಸಭೆ
ವಿರಾಜಪೇಟೆ: ತಾಲೂಕು ಕಚೇರಿಯಲ್ಲಿ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣನವರು, ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಜನಾಂಗದವರಿಗೆ ವಸತಿ ಕಲ್ಪಿಸುವ ವಿಶೇಷ ಯೋಜನೆಯ ಕುರಿತಾಗಿ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಈ ಸಭೆಯಲ್ಲಿ ಜಿಲ್ಲಾ ಗ್ಯಾರೆಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಧರ್ಮಜ ಉತ್ತಪ್ಪ, ಜಿಲ್ಲಾಧಿಕಾರಿಗಳಾದ ವೆಂಕಟರಾಜ್ , ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಾದ ಆನಂದ್ ಪ್ರಕಾಶ್ ಮೀನಾ, ಕ್ಷೇತ್ರ ವ್ಯಾಪ್ತಿಯ ತಹಶೀಲ್ದಾರರುಗಳು, ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0

