ವಿರಾಜಪೇಟೆ:ಬಿಜೆಪಿ ಶಕ್ತಿ ಕೇಂದ್ರದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಸಂಸದ ಯದುವೀರ್ ಒಡೆಯರ್ ಭಾಗಿ

ವಿರಾಜಪೇಟೆ:ಇಂದು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬಲ್ಯಮುಂಡೂರು ಗ್ರಾಮದಲ್ಲಿರುವ ಶಕ್ತಿ ಕೇಂದ್ರದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಒಡೆಯರ್ ಅವರು ಭಾಗವಹಿಸಿˌ ಜನರ ಕುಂದು ಕೊರತೆಗಳನ್ನು ಆಲಿಸಿˌ ಅಹವಾಲುಗಳನ್ನು ಸ್ವೀಕರಿಸಿದರು. ಗ್ರಾಮಸ್ಥರ ಮನವಿಗಳಿಗೆ ಸೂಕ್ತವಾಗಿ ಸ್ಪಂದಿಸಿ ಶೀಘ್ರದಲ್ಲೇ ಪರಿಹಾರ ಒದಗಿಸುವ ಭರವಸೆ ನೀಡಲಾಯಿತು. ವಿರಾಜಪೇಟೆ ತಾಲೂಕಿನ ಬಿರುನಾಣಿಯಲ್ಲಿರುವ ಶಕ್ತಿ ಕೇಂದ್ರದಲ್ಲಿ ಸಾರ್ವಜನಿಕ ಸಭೆಯಲ್ಲಿ ಕೂಡ ಯದುವೀರ್ ಒಡೆಯರ್ ಭಾಗವಹಿಸಿದ್ದರು.
ಈ ಸಂದರ್ಭ ಕೊಡಗು ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ,ಹಾಗೂ ಜಿಲ್ಲಾ ಬಿಜೆಪಿ ಮುಖಂಡರು ಇದ್ದರು.