ವಿರಾಜಪೇಟೆ:ಧರ್ಮಸ್ಥಳ ಗ್ರಾಮಾಭಿವೃದ್ಧಿ ಟ್ರಸ್ಟ್ ವತಿಯಿಂದ ಪರಿಸರ ಜಾಗೃತಿ ಕಾರ್ಯಕ್ರಮ

ವಿರಾಜಪೇಟೆ:ಧರ್ಮಸ್ಥಳ ಗ್ರಾಮಾಭಿವೃದ್ಧಿ ಟ್ರಸ್ಟ್ ವತಿಯಿಂದ ಪರಿಸರ ಜಾಗೃತಿ ಕಾರ್ಯಕ್ರಮ

ವಿರಾಜಪೇಟೆ:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ,ಸಿ ಟ್ರಸ್ಟ್ (ರಿ)ವಿರಾಜಪೇಟೆ ತಾಲೂಕು, ಕೃಷಿ ಕಾರ್ಯಕ್ರಮದಡಿಯಲ್ಲಿ ಅಮ್ಮತಿ ವಲಯದ ಚೆಂಬೆಬೆಳ್ಳೂರು ಕಾರ್ಯಕ್ಷೇತ್ರದ ವತಿಯಿಂದ ಸರಕಾರಿ ಪ್ರೌಢಶಾಲೆ ದೇವಣಗೇರಿ ಶಾಲೆಯಲ್ಲಿ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ವಲಯ ಅರಣ್ಯ ಅಧಿಕಾರಿ ರಾಘವ ಅವರು ಮಾತನಾಡಿ ಪರಿಸರ ಸಂರಕ್ಷಣೆ ಹೇಗೆ ಮಾಡಬೇಕು, ಪರಿಸರ ಉಳಿವಿಗಾಗಿ ನಾವು ಸದಾ ಪ್ರಯತ್ನ ಪಡಬೇಕು, ಹಲವು ತಳಿಯ ಗಿಡಗಳನ್ನು ಹೇಗೆ ಉಳಿಸಬೇಕು ಎಂದು ಉತ್ತಮವಾದ ಮಾಹಿತಿ ನೀಡಿದರು. 

  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕಿನ ಯೋಜನಾಧಿಕಾರಿ ಹರೀಶ್ ಪಿ ಮಾತನಾಡಿ ಯೋಜನೆಯ ಹತ್ತು ಹಲವು ಕಾರ್ಯಕ್ರಮಗಳಲ್ಲಿ ಸಮುದಾಯ ಅಭಿವೃದ್ಧಿ ಕಾರ್ಯದಲ್ಲಿ ಪರಿಸರ ಮಾಹಿತಿ ಕಾರ್ಯಕ್ರಮ ಒಂದಾಗಿದ್ದು, ಶಾಲಾ ಮಕ್ಕಳಿಗೆ ಪರಿಸರದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಆಗಬೇಕು. ಹಣ್ಣಿನ ಗಿಡಗಳನ್ನು ನಾಟಿ ಮಾಡುವುದರಿಂದ ಶುದ್ಧವಾದ ಗಾಳಿ ಮತ್ತು ಹಣ್ಣು ಸಿಗುತ್ತದೆ ಎಂದು ಮಾಹಿತಿ ನೀಡಿದರು. 

   ಸರಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಲೋಕೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರಕೃತಿಯನ್ನು ಹೇಗೆ ಉಳಿಸಬೇಕು ಪ್ರಕೃತಿ ಬಗ್ಗೆ ಮಕ್ಕಳಲ್ಲಿ ಜ್ಞಾನ ಬರಬೇಕು. ಪ್ರಕೃತಿ ಸಂಪತ್ತನ್ನು ಉಳಿಸಬೇಕು ಎಂದು ಮಾಹಿತಿ ನೀಡಿದರು.

 ಇದೇ ಸಂದರ್ಭ ಪರಿಸರಕ್ಕೆ ಸಂಬಂಧಿಸಿದಂತೆ ಮಕ್ಕಳಿಗೆ ಚಿತ್ರಕಲಾ ಸ್ಪರ್ಧೆ ಪ್ರಬಂಧ ಸ್ಪರ್ಧೆ ಎಲೆಗಳನ್ನು ಗುರುತಿಸುವ ಸ್ಪರ್ಧೆ ಏರ್ಪಡಿಸಿ ಬಹುಮಾನ ವಿತರಣೆ ಮಾಡಲಾಯಿತು.ಬಳಿಕ ಶಾಲಾ ಆವರಣದಲ್ಲಿ ವಿವಿಧ ರೀತಿಯ ಹಣ್ಣಿನ ಗಿಡಗಳನ್ನು ನಾಟಿ ಮಾಡಲಾಯಿತು.   ಈ ಕಾರ್ಯಕ್ರಮದಲ್ಲಿ ಗ್ರಾಮಾಭಿವೃದ್ದಿ ಯೋಜನೆಯ ಕೃಷಿ ಅಧಿಕಾರಿ ವಸಂತ್, ವಲಯ ಮೇಲ್ವಿಚಾರಕ ದನೇಶ್, ಶಾಲಾ ಶಿಕ್ಷಕರಾದ ಸುನೀತ, ಚೆಂಬೆಬೆಳ್ಳೂರು ಒಕ್ಕೂಟದ ಉಪಾಧ್ಯಕ್ಷ ಸುಮ, ಶೌರ್ಯ ಘಟಕದ ಸದಸ್ಯರಾದ ವಿನ್ಯ, ಸೇವಾ ಪ್ರತಿನಿಧಿ ದೇವಕಿ ಸಂಘದ ಸದಸ್ಯರು, ಶಾಲಾ ವಿದ್ಯಾರ್ಥಿಗಳು, ಶಿಕ್ಷಕ ವೃಂದದವರು, ಅರಣ್ಯ ಇಲಾಖೆಯ ಸಿಬ್ಬಂದಿಗಳು ಇದ್ದರು.