Kodagu

ವಿರಾಜಪೇಟೆ;ಮರದಿಂದ ಬಿದ್ದು ಕೃಷಿಕ ದುರ್ಮರಣ

admincoorgdaily

ಸಾಂದರ್ಭಿಕ ಚಿತ್ರ
ವೀರಾಜಪೇಟೆ:ತೋಟದಲ್ಲಿ ಮರದ ಕೊಂಬೆಗಳನ್ನು ಕತ್ತರಿಸುವ ಸಂದರ್ಭ ಆಕಸ್ಮಿಕವಾಗಿ ಕೆಳಕ್ಕೆ ಬಿದ್ದು ಗಂಭೀರವಾಗಿ ಗಾಯಗೊಂಡ ಕೃಷಿಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ವೀರಾಜಪೇಟೆ ತಾಲೂಕಿನ ದೇವಣಗೇರಿ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟವರು ದೇವಣಗೇರಿ ಗ್ರಾಮದ ನಿವಾಸಿ ಪಿ.ಯು. ಮೊಣ್ಣಯ್ಯ (68).

ಮೊಣ್ಣಯ್ಯ ಅವರು ಇಂದು ಮಧ್ಯಾಹ್ನ ಊಟ ಮುಗಿಸಿ ತಮ್ಮ ತೋಟಕ್ಕೆ ತೆರಳಿದ್ದರು. ಸಣ್ಣ ಗಾತ್ರದ ಮರದ ಕೊಂಬೆಗಳನ್ನು ಕತ್ತರಿಸುವ ಸಲುವಾಗಿ ಮರವೇರಿದ್ದರು. ಕೊಂಬೆಗಳನ್ನು ಕತ್ತರಿಸುತ್ತಿದ್ದ ಸಂದರ್ಭ ಆಕಸ್ಮಿಕವಾಗಿ ಆಯತಪ್ಪಿ ನೆಲಕ್ಕೆ ಬಿದ್ದಿದ್ದಾರೆ.

ಗಂಭೀರವಾಗಿ ಗಾಯಗೊಂಡ ಮೊಣ್ಣಯ್ಯ ಅವರು ಪತ್ನಿಗೆ ದೂರವಾಣಿ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಪತ್ನಿ ಕುಟುಂಬದ ಸದಸ್ಯರಿಗೆ ಮಾಹಿತಿ ನೀಡಿದ ಮೇರೆಗೆ ಸ್ಥಳಕ್ಕೆ ಧಾವಿಸಿದ ಕುಟುಂಬಸ್ಥರು ತೋಟದಲ್ಲಿ ಮರದ ಕೆಳಗೆ ನರಳುತ್ತಿದ್ದ ಅವರನ್ನು ವೀರಾಜಪೇಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೊಣ್ಣಯ್ಯ ಕೊನೆಯುಸಿರೆಳೆದಿದ್ದಾರೆ.

ವೀರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಆಕಸ್ಮಿಕ ಮರಣ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.