Kodagu

ವಿರಾಜಪೇಟೆ;ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ

admincoorgdaily

ವಿರಾಜಪೇಟೆ;ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ
ವಿರಾಜಪೇಟೆ:ವಿರಾಜಪೇಟೆ ತಾಲೂಕು ಬಿಟ್ಟಂಗಾಲ ಭಾಗದ 18ಕ್ಕೂ ಹೆಚ್ಚು ಜನ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು.

ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರ ಕಾರ್ಯವೈಖರಿ ಹಾಗೂ ಅಭಿವೃದ್ಧಿಯ ದೂರದೃಷ್ಟಿಯನ್ನು ಮೆಚ್ಚಿ ಅವರು ಕಾಂಗ್ರೆಸ್ ಸೇರಿದರು.

ಶಾಸಕರ ನೇತೃತ್ವದಲ್ಲಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತಿತೀರ ಧರ್ಮಜ ಉತ್ತಪ್ಪ, ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ವಲಯ ಅಧ್ಯಕ್ಷ ಲೋಹಿತ್, ಮುಖಂಡರಾದ ಕಂಜಿತಂಡ ಪೂವಣ್ಣ, ಚೇಂದಂಡ ಪೊನ್ನಣ್ಣ, ಕುಪ್ಪಂಡ ಬೋಪಣ್ಣ, ಚಂದೂರ ಜಗನ್ ಬೋಪಯ್ಯ, ಕಂಜಿತಂಡ ಅಶ್ವಥ್ ಅವರ ಸಮ್ಮುಖದಲ್ಲಿ ಸೇರ್ಪಡೆ ಕಾರ್ಯಕ್ರಮ ನಡೆಯಿತು.

ಶಾಸಕರ ನಿರಂತರ ಅಭಿವೃದ್ಧಿ ಕೆಲಸ ಹಾಗೂ ಜನಪರ ಚಿಂತನೆಯಿಂದ ಕ್ಷೇತ್ರದಲ್ಲಿ ಅನೇಕ ಕಾಮಗಾರಿಗಳು ನಡೆಯುತ್ತಿರುವುದನ್ನು ಗಮನಿಸಿ, ಅವರಿಗೆ ಮತ್ತಷ್ಟು ಬಲ ನೀಡಲು ಕಾಂಗ್ರೆಸ್ ಸೇರುತ್ತಿರುವುದಾಗಿ ಬಿಜೆಪಿ ತೊರೆದ ಪ್ರಮುಖರು ತಿಳಿಸಿದರು.

ಈ ಸಂದರ್ಭದಲ್ಲಿ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಿದೇರಿರ ನವೀನ್, ವಿರಾಜಪೇಟೆ ಬ್ಲಾಕ್ ಬಗರ್ ಹುಕುಂ ಅಧ್ಯಕ್ಷ ಅಬ್ದುಲ್ ಸಲಾಂ, ಕಂಜಿತಂಡ ಗಿಣಿ ಮೊಣ್ಣಪ್ಪ, ಕೊಂಗಂಡ ಕಾಶಿ ಕಾರ್ಯಪ್ಪ, ಗಣೇಶ್ ನಂಜಪ್ಪ, ಅಜ್ಜಿಕುಟ್ಟಿರ ಗಿರೀಶ್, ಚಂಗುಲಂಡ ಸೂರಜ್, ರೀಕ್ಷಿತ್ ಕಾರ್ಯಪ್ಪ, ರಚನ್ ಉತ್ತಪ್ಪ ಉಪಸ್ಥಿತರಿದ್ದರು.