ವಿರಾಜಪೇಟೆ-ಮಡಿಕೇರಿ ರಸ್ತೆ ಕಾಮಗಾರಿ ಆರಂಭ: ಎ.ಎಸ್.ಪೊನ್ನಣ್ಣ ಸೂಚನೆ ಮೇರೆಗೆ ತ್ವರಿತಗತಿಯಲ್ಲಿ ಕಾಮಗಾರಿ
admincoorgdaily

ವಿರಾಜಪೇಟೆ;
ವಿರಾಜಪೇಟೆಯಿಂದ ಮಡಿಕೇರಿ ಕಡೆಗೆ ತೆರಳುವ ಮುಖ್ಯ ರಸ್ತೆಯ ಕಾಮಗಾರಿ ಆರಂಭಗೊಂಡಿದೆ. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ವಿರಾಜಪೇಟೆ ಶಾಸಕರಾದ ಎ.ಎಸ್. ಪೊನ್ನಣ್ಣ ಅವರ ಸೂಚನೆಯಂತೆ ಈ ಕಾಮಗಾರಿ ಶೀಘ್ರವಾಗಿ ಪೂರ್ಣಗೊಳ್ಳಲಿದೆ.
ಕಳೆದ ಮಳೆಗಾಲದಲ್ಲಿ ಹದಗೆಟ್ಟಿದ್ದ ರಸ್ತೆಯನ್ನು ಗಮನಿಸಿದ ಶಾಸಕರು, ವಿಶೇಷ ಅನುದಾನದಡಿ ಕಾಮಗಾರಿ ಕೈಗೆತ್ತಿಕೊಳ್ಳಲು ಸೂಚಿಸಿದ್ದರು. ಗುಣಮಟ್ಟ ಕಾಯ್ದುಕೊಂಡು ಶೀಘ್ರದಲ್ಲೇ ರಸ್ತೆ ನಿರ್ಮಿಸುವಂತೆ ಗುತ್ತಿಗೆದಾರರು ಹಾಗೂ ಎಂಜಿನಿಯರಿಂಗ್ ವಿಭಾಗಕ್ಕೆ ಅವರು ಸೂಚಿಸಿದ್ದಾರೆ.