ವಿರಾಜಪೇಟೆ: ಕಣ್ಣಂಗಾಲದಲ್ಲಿ ರೇಬಿಸ್ ಲಸಿಕಾ ಅಭಿಯಾನಕ್ಕೆ ಶಾಸಕ ಎ.ಎಸ್. ಪೊನ್ನಣ್ಣ ಚಾಲನೆ
admincoorgdaily

ವಿರಾಜಪೇಟೆ: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವೆಗಳು ಇಲಾಖೆ, ವಿರಾಜಪೇಟೆ ವತಿಯಿಂದ ಕಣ್ಣಂಗಾಲ ಭಾಗದಲ್ಲಿ ಆಯೋಜಿಸಲಾಗಿದ್ದ ರೇಬಿಸ್ ಲಸಿಕಾ ಅಭಿಯಾನ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ವಿರಾಜಪೇಟೆ ಶಾಸಕರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ವಲಯ ಅಧ್ಯಕ್ಷರಾದ ಮಚ್ಚರಂಡ ಕಿರಣ್, ಬೇರೇರಾ ಕಿರಣ್, ಡಾ. ವರುಣ್ ಸೇರಿದಂತೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.