ವಿರಾಜಪೇಟೆ: ಗಣೇಶೋತ್ಸವದ ಪೂರ್ವಭಾವಿ ಸಭೆ

admincoorgdaily

ವಿರಾಜಪೇಟೆ: ಗಣೇಶೋತ್ಸವದ ಪೂರ್ವಭಾವಿ ಸಭೆ
ವಿರಾಜಪೇಟೆ;  ಗಣೇಶೋತ್ಸವದ ಪೂರ್ವಭಾವಿ ಸಭೆಯಲ್ಲಿ, ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಭಾಗವಹಿಸಿದರು.

    ಶಾಸಕರ ವಿರಾಜಪೇಟೆಯ ಗೃಹ ಕಚೇರಿಯಲ್ಲಿ ಆಯೋಜನೆಗೊಂಡ ಈ ಸಭೆಯಲ್ಲಿ ಭಾಗವಹಿಸಿದ ಎಲ್ಲಾ ಗಣೇಶೋತ್ಸವ ಸಮಿತಿಯ ಪ್ರಮುಖರನ್ನು ಉದ್ದೇಶಿಸಿ ಮಾತನಾಡಿದ  ಶಾಸಕರು, ಪ್ರತಿ ವರ್ಷದಂತೆ ಈ ವರ್ಷವೂ ಅತ್ಯಂತ ವಿಜೃಂಭಣೆಯಿಂದ, ಸಕಲ ವ್ಯವಸ್ಥೆಗಳನ್ನು ಸಾರ್ವಜನಿಕರಿಗೆ ಅನುಕೂಲ ಆಗುವಂತೆ ಕಲ್ಪಿಸುತ್ತಾ ಶ್ರೀ ಗಣೇಶೋತ್ಸವವನ್ನು ಆಚರಿಸುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಕಿವಿಮಾತು ಹೇಳಿದರು. 

ಗಣೇಶೋತ್ಸವ ಸಮಿತಿಯವರ ಅವಾಲುಗಳನ್ನು ಹಾಗೂ ಬೇಡಿಕೆಗಳನ್ನು ಆಲಿಸಿದ ಮಾನ್ಯ ಶಾಸಕರು, ಹಲವು ಸಲಹೆ ಸೂಚನೆಗಳನ್ನು ನೀಡಿದರಲ್ಲದೆ, ಪ್ರತಿಯೊಂದು ಸಮಿತಿಯವರು ಅತ್ಯಂತ ಜವಾಬ್ದಾರಿಯಿಂದ ಹಾಗೂ ಕಾಳಜಿಯಿಂದ ಗಣೇಶೋತ್ಸವ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಹಾಗೂ ಅತ್ಯಂತ ಯಶಸ್ಸಿನಿಂದ ಸಂಪನ್ನಗೊಳಿಸಬೇಕು ಹಾಗೂ ಇದಕ್ಕೆ ಬೇಕಾದ ಎಲ್ಲಾ ಕಾರ್ಯತಂತ್ರಗಳನ್ನು ಈ ಸಭೆಯಲ್ಲಿ ಚರ್ಚಿಸಲಾಯಿತು.

ಇಷ್ಟು ವರ್ಷ ಗಣೇಶೋತ್ಸವ ಆಚರಣೆ ಹೇಗೆ ನಡೆಯುತ್ತಿತ್ತು ಅದೇ ರೀತಿಯಲ್ಲಿ ನಡೆಯಲಿ. ಧ್ವನಿವರ್ಧಕ ವಿಷಯದಲ್ಲಿ ಸರ್ಕಾರದ ಆದೇಶವನ್ನು ಪಾಲನೆ ಮಾಡಬೇಕು ಮುಂಜಾಗ್ರತಾ ಕ್ರಮವನ್ನು ಕಟ್ಟುನಿಟ್ಟಾಗಿ ಸರ್ಕಾರದ ಆದೇಶವನ್ನು ಪಾಲಿಸಬೇಕು ಎಂದು  ಶಾಸಕರು ತಿಳಿಸಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಾದ ಬಿಂದು ಮಣಿ ರವರು ಮಾತನಾಡಿ, ಸರ್ಕಾರದ ಸೂಚನೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಹೇಳಿದ್ದರು.
 
ಈ ಸಭೆಯಲ್ಲಿ ವಿರಾಜಪೇಟೆ ತಾಲೂಕು ತಹಶೀಲ್ದಾರ್ ಪ್ರವೀಣ್, ವಿರಾಜಪೇಟೆ ನಗರ ಕಾಂಗ್ರೆಸ್ ಅಧ್ಯಕ್ಷರಾದ ಮಾಳೇಟೀರ ಬೋಪಣ್ಣ, ಮಾಜಿ ನಗರ ಅಧ್ಯಕ್ಷರು ಮಾದಂಡ ತಿಮ್ಮಯ್ಯ, ವಕೀಲರಾದ ನರೇಂದ್ರ ಕಾಮತ್, ಗಣೇಶೋತ್ಸವ ಆಚರಣೆ ಸಮಿತಿಯ ಅಧ್ಯಕ್ಷರುಗಳು, ಪದಾಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.