ಜಿಲ್ಲಾ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ವಿರಾಜಪೇಟೆ ವಿದ್ಯಾರ್ಥಿಗಳ ಸಾಧನೆ
admincoorgdaily

ವಿರಾಜಪೇಟೆ: ಕೊಡಗು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಮಡಿಕೇರಿಯಲ್ಲಿ ಇತ್ತೀಚೆಗೆ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ವಿರಾಜಪೇಟೆಯ' ಪೆರುಂಬಾಡಿಯ ಝೆನ್ ಸಿಟೋರಿಯೋ ಕರಾಟೆ ಸ್ಕೂಲ್ ಆಫ್ ಇಂಡಿಯಾ'ದ ಶಾಲಾ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದು ಸಾಧನೆ ಮಾಡಿದ್ದಾರೆ.
ವಿರಾಜಪೇಟೆ ರೋಟರಿ ಇಂಗ್ಲಿಷ್ ಮೀಡಿಯಂ ಶಾಲೆಯ ವಿದ್ಯಾರ್ಥಿ ಪ್ರಜನ್ ಎನ್.ಬಿ. ಹಾಗೂ ಸಂತ ಅನ್ನಮ್ಮ ಶಾಲೆಯ ವಿದ್ಯಾರ್ಥಿನಿ ಗಾನವಿ ಎನ್.ಎಲ್. ಅವರುಗಳು ತಮ್ಮ ವಿಭಾಗಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ಸಾಧನೆಗೈದ ಈ ವಿದ್ಯಾರ್ಥಿಗಳಿಗೆ 'ಝೆನ್ ಸಿಟೋರಿಯೋ ಕರಾಟೆ ಸ್ಕೂಲ್ ಆಫ್ ಇಂಡಿಯಾ'ದ ಸೆನ್ಸಾಯ್ ಶಿವಪ್ಪ ಅವರು ತರಬೇತಿ ನೀಡಿದ್ದರು.
ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಗಳ ಆಡಳಿತ ಮಂಡಳಿ ಹಾಗೂ ಶಿಕ್ಷಕ ವೃಂದದವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.