ಕೊಡಗು ಜಿಲ್ಲೆಯಲ್ಲಿ ಪಾಸ್ ಪೋರ್ಟ್ ಸೇವಾ ಕೇಂದ್ರ ಸ್ಥಾಪಿಸಲು ಸಂಸದರಿಗೆ ವಿರಾಜಪೇಟೆ ತಾಲ್ಲೂಕು ಜೆಡಿಎಸ್ ಯುವ ಘಟಕದಿಂದ ಮನವಿ ಸಲ್ಲಿಕೆ

ವಿರಾಜಪೇಟೆ:ಕೊಡಗು ಜಿಲ್ಲೆಯಲ್ಲಿ ಪಾಸ್ ಪೋರ್ಟ್ ಸೇವಾ ಕೇಂದ್ರವನ್ನು ಸ್ಥಾಪಿಸಬೇಕೆಂದು ಆಗ್ರಹಿಸಿ ಕೊಡಗು ಮೈಸೂರು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಒಡೆಯರ್ ರವರಿಗೆ ಜೆಡಿಎಸ್ ವಿರಾಜಪೇಟೆ ತಾಲ್ಲೂಕು ಯುವ ಘಟಕದ ಅಧ್ಯಕ್ಷರಾದ ಸೈಫುದ್ದೀನ್ ಚಾಮಿಯಲ್ ರವರ ನೇತೃತ್ವದಲ್ಲಿ ಮನವಿ ಪತ್ರವನ್ನು ಸಲ್ಲಿಸಿದರು.
ಕೊಡಗು ಗುಡ್ಡಗಾಡು ಪ್ರದೇಶವಾಗಿದ್ದು, ಇಲ್ಲಿಯ ನಿವಾಸಿಗಳಿಗೆ ದೂರ ಪ್ರದೇಶಗಳಾದ ಮಂಗಳೂರು ,ಮೈಸೂರು ಬೆಂಗಳೂರು ,ಕಡೆಗಳಿಗೆ ಪಾಸ್‌ಪೋರ್ಟ್ ಮಾಡಿಸಲು ಹೋಗಲು ತೊಂದರೆಯಾಗಿದ್ದು, ಕೊಡಗು ಜಿಲ್ಲೆಯಲ್ಲೇ ಸೇವಾ ಕೇಂದ್ರವನ್ನು ಸ್ಥಾಪಿಸಬೇಕೆಂದು ಮನಸಿ ಸಲ್ಲಿಸಿದರು. ಮನವಿಗೆ ಸ್ಪಂದಿಸಿದ ಸಂಸದರು ಸಂಬಂಧಪಟ್ಟ ಇಲಾಖೆಯೊಂದಿಗೆ ಶೀಘ್ರವೇ ಮಾತನಾಡುವೆ ಎಂದು ಭರವಸೆ ನೀಡಿದರು.ಈ ಸಂದರ್ಭ ಕೊಡಗು ಜಿಲ್ಲಾ ಜೆಡಿಎಸ್ ಸಾಮಾಜಿಕ ಜಾಲತಾಣ ಉಪಾಧ್ಯಕ್ಷ ಶಿಯಾಬುದ್ದಿನ್ ವಿಪಿಎಸ್ ನೆಲ್ಲಿಹುದಿಕೇರಿ ಉಪಸ್ಥಿತರಿದ್ದರು.