ವಿರಾಜಪೇಟೆ: ವೆಲ್ಡಿಂಗ್ ಕಾರ್ಮಿಕರಿಗೆ ವೆಲ್ಡಿಂಗ್ ಕಿಟ್ ವಿತರಿಸಿದ ಎ.ಎಸ್ ಪೊನ್ನಣ್ಣ

ವಿರಾಜಪೇಟೆ: ವೆಲ್ಡಿಂಗ್ ಕಾರ್ಮಿಕರಿಗೆ ವೆಲ್ಡಿಂಗ್ ಕಿಟ್ ವಿತರಿಸಿದ ಎ.ಎಸ್ ಪೊನ್ನಣ್ಣ

ವಿರಾಜಪೇಟೆ: ಶಾಸಕರ ಗೃಹ ಕಚೇರಿಯಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೊಳಪಡುವ ಗ್ರಾಮಗಳ ಮಡಿಕೇರಿಯಲ್ಲಿ ನೋಂದಣಿಯಾದ 8 ಜನ ವೆಲ್ಡಿಂಗ್ ಕಾರ್ಮಿಕರಿಗೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರ ಶಾಸಕರು ಹಾಗೂ ಮುಖ್ಯಮಂತ್ರಿಯವರ ಕಾನೂನು ಸಲಹೆಗಾರರಾದ ಎ‌.ಎಸ್ ಪೊನ್ನಣ್ಣನವರು ವೆಲ್ಡಿಂಗ್ ಕಿಟ್ ಗಳನ್ನು ವಿತರಿಸಿದರು.ಈ ಸಂದರ್ಭದಲ್ಲಿ ಸೋಮವಾರಪೇಟೆ ಹಾಗೂ ವಿರಾಜಪೇಟೆ ವೃತ್ತದ ಹಿರಿಯ ಕಾರ್ಮಿಕ ನಿರೀಕ್ಷಕರಾದ ಶಶಿಧರ್ ಎಸ್ ರವರು, ವಿರಾಜಪೇಟೆ ಹಾಗೂ ಮಡಿಕೇರಿ ಹಿರಿಯ ಕಾರ್ಮಿಕ ನಿರೀಕ್ಷಕರ ಕಚೇರಿಯ ಸಿಬ್ಬಂದಿಗಳು,ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎ ಇಸ್ಮಾಯಿಲ್, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಿದೇರಿರ ನವೀನ್, ಜಿಲ್ಲಾ ಕಾಂಗ್ರೆಸ್ ವಕ್ತಾರ ತೆನ್ನೀರ ಮೈನಾ ಇದ್ದರು.