ಬಾಲಕಿ ಮೇಲಿನ ಅತ್ಯಾಚಾರ ಖಂಡಿಸಿ WIM ಪ್ರತಿಭಟನೆ
admincoorgdaily

ಮಡಿಕೇರಿ: ಬಂಗಾರಪೇಟೆಯಲ್ಲಿ ಆರು ವರ್ಷದ ಬಾಲಕಿ ಮೇಲೆ ನಡೆದ ಅತ್ಯಾಚಾರ ಹಾಗೂ ರಾಜ್ಯದ ವಿವಿಧೆಡೆ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳನ್ನು ಖಂಡಿಸಿ ವಿಮೆನ್ ಇಂಡಿಯಾ ಮೂವ್‌ಮೆಂಟ್ ಕೊಡಗು ಜಿಲ್ಲಾ ಘಟಕದ ವತಿಯಿಂದ ನಗರದ ಚೌಕಿ ವೃತ್ತದ ಬಳಿ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯಲ್ಲಿ ಮಾತನಾಡಿದ ಜಿಲ್ಲಾಧ್ಯಕ್ಷೆ ರಿಶಾನ, ರಾಜ್ಯದಲ್ಲಿ ಹೆಣ್ಣುಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದೆ. ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಪುಟ್ಟ ಬಾಲಕಿಯರ ಮೇಲೂ ಅತ್ಯಾಚಾರ ನಡೆಯುತ್ತಿರುವುದು ಖಂಡನೀಯ. ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದರು.
ಮಹಿಳೆಯರ ಸುರಕ್ಷತೆಗೆ ಸರ್ಕಾರ ಮತ್ತು ಪೊಲೀಸ್ ಇಲಾಖೆ ಹೆಚ್ಚಿನ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಸಂಘಟನೆಯ ಉಪಾಧ್ಯಕ್ಷೆ ಝಾಕಿಯಾ, ಕಾರ್ಯದರ್ಶಿ ಮೇರಿ ವೇಗಸ್, ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಿದ್ದರು.