ರಾಜ್ಯಮಟ್ಟದ ಬ್ಯಾಡ್ಮಿಂಟನ್ನಲ್ಲಿ ಚಾಂಪಿಯನ್ ಆದ ಕೊಡಗಿನ ಯುವಿಕಾ: ರಾಷ್ಟ್ರಮಟ್ಟಕ್ಕೆ ಆಯ್ಕೆ
admincoorgdaily

ಪೊನ್ನಂಪೇಟೆ, 22: ಯೋನೆಕ್ಸ್-ಸನ್ರೈಸ್ ಕರ್ನಾಟಕ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಕೊಡಗಿನ ಯುವ ಪ್ರತಿಭೆ ನೆಲ್ಜಿಗ್ರಾಮದ ಮಂಡಿರ ಯುವಿಕಾ ತಮಯ್ಯ ಅಂಡರ್-11 ಬಾಲಕಿಯರ ಸಿಂಗಲ್ಸ್ ವಿಭಾಗದಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಯುವಿಕಾ ಗೋಣಿಕೊಪ್ಪ ಕ್ಯಾಲ್ಸ್ ಶಾಲೆಯ 5 ನೇ ತರಗತಿ ವಿದ್ಯಾರ್ಥಿನಿ. ನ.14ರಿಂದ 19ರವರೆಗೆ ನಡೆದ ರಾಜ್ಯಮಟ್ಟದ ಪಂದ್ಯಾವಳಿಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಪ್ರತಿಭಾವಂತ ಆಟಗಾರ್ತಿಯರೊಂದಿಗೆ ಸ್ಪರ್ಧಿಸಿದ ಯುವಿಕಾ, ಉತ್ತಮ ಕೌಶಲ್ಯ, ಕಠಿಣ ಪರಿಶ್ರಮ ಹಾಗೂ ಆತ್ಮವಿಶ್ವಾಸದ ಆಟದ ಮೂಲಕ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು.
ಈ ಸಾಧನೆಯ ಮತ್ತೊಂದು ಹೆಗ್ಗಳಿಕೆಯಾಗಿ, ನ.24ರಿಂದ 27ರವರೆಗೆ ಛತ್ತೀಸ್ಗಢದ ರಾಯ್ಪುರದಲ್ಲಿ ನಡೆಯಲಿರುವ ಮಿನಿ ನ್ಯಾಷನಲ್ಸ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ಗೆ ಕರ್ನಾಟಕ ತಂಡವನ್ನು ಪ್ರತಿನಿಧಿಸಲು ಯುವಿಕಾ ಆಯ್ಕೆಯಾಗಿದ್ದಾರೆ.
ಚಿಕ್ಕ ವಯಸ್ಸಿನಲ್ಲಿಯೇ ರಾಜ್ಯಮಟ್ಟದ ಪ್ರಶಸ್ತಿ ಗೆದ್ದು ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುವುದು ಅವರ ಕ್ರೀಡಾ ಆಸಕ್ತಿ, ನಿರಂತರ ಅಭ್ಯಾಸ ಹಾಗೂ ಪರಿಶ್ರಮಕ್ಕೆ ಸಾಕ್ಷಿಯಾಗಿದೆ.
ಇತ್ತೀಚೆಗೆ ದಾವಣಗೆರೆಯಲ್ಲಿ ನಡೆದ u-11 ಚಾಂಪಿಯನ್ಶಿಪ್ ನಲ್ಲಿಯೂ ಯುವಿಕಾ -ಶನಯಾ ಜೋಡಿ ರನ್ನರ್ಸ್ ಪ್ರಶಸ್ತಿ ಗೆದ್ದುಕೊಂಡಿದ್ದಾರೆ.
ಯುವಿಕಾ ಅವರ ಸಾಧನೆಗೆ ಪೋಷಕರಾದ ಮಂಡಿರ ಕಿಶೋರ್ ತಮಯ್ಯ ಮತ್ತು ಶ್ರುತಿ, ತರಬೇತುದಾರ ರಘುರಾಜ್ ಸೇರಿದಂತೆ ಕೊಡಗಿನ ಕ್ರೀಡಾಭಿಮಾನಿಗಳು ಅಭಿನಂದನೆ ಸಲ್ಲಿಸಿದ್ದಾರೆ.ಯುವಿಕಾ ಗೋಣಿಕೊಪ್ಪ ಕ್ಯಾಲ್ಸ್ ಶಾಲೆಯ 5 ನೇ ತರಗತಿ ವಿದ್ಯಾರ್ಥಿನಿ. ರಾಷ್ಟ್ರಮಟ್ಟದ ಪಂದ್ಯಾವಳಿಯಲ್ಲಿಯೂ ಯುವಿಕಾ ಉತ್ತಮ ಪ್ರದರ್ಶನ ನೀಡಿ ಮತ್ತಷ್ಟು ಸಾಧನೆ ಮಾಡುವಂತಾಗಲಿ ಎಂದು ಶಾಲೆಯ ಶಿಕ್ಷಕ ವೃಂದದವರು ಹಾಗೂ ಕ್ರೀಡಾ ಅಭಿಮಾನಿಗಳು ಹಾರೈಸಿದ್ದಾರೆ.