ಅನ್ವಾರುಲ್ ಹುದಾ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Jun 6, 2025 - 00:33
 0  31
ಅನ್ವಾರುಲ್ ಹುದಾ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ವಿರಾಜಪೇಟೆ: ಅನ್ವಾರುಲ್ ಹುದಾ ಪಬ್ಲಿಕ್ ಶಾಲೆಯಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. ಶಾಲಾ ಶಿಕ್ಷಕರಾದ ಯಾಕೂಬ್ ರಿಜ್ವಿ ಪರಿಸರ ಸಂರಕ್ಷಣೆಯ ಬಗ್ಗೆ ಮಾತನಾಡಿದರು. ಕಾರ್ಯಕ್ರಮದ ಅಂಗವಾಗಿ ಭಾಷಣ ಸ್ಪರ್ಧೆ, ಫ್ಯಾನ್ಸಿ ಡ್ರೆಸ್, ಚಿತ್ರರಚನೆ ಮತ್ತು ಪ್ರಬಂಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಯಿತು. ವಿಜೇತರಿಗೆ ಬಹುಮಾನ ವಿತರಿಸಲಾಯಿತು. ವಿದ್ಯಾರ್ಥಿಗಳು ಗಿಡಗಳನ್ನು ನೆಟ್ಟು ಪರಿಸರದ ಮಹತ್ವವನ್ನು ಅನುಭವದಿಂದ ಅರ್ಥಮಾಡಿಕೊಳ್ಳುವ ಅವಕಾಶ ಪಡೆದರು. ಕಾರ್ಯಕ್ರಮದಲ್ಲಿ ಇಲ್ಯಾಸ್ ಅನ್ವಾರಿ MM, ಯಾಕೂಬ್ ರಿಜ್ವಿ, ಜಯಂತಿ CP ಮತ್ತು ಮುಖ್ಯ ಶಿಕ್ಷಕಿ ರೂಹಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಸ್ವಾಗತ ದಿವ್ಯ VP ಅವರು ಮಾಡಿದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0