ಅಭ್ಯತ್ ಮಂಗಲ-ಮರಗೋಡು ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ
ಮಡಿಕೇರಿ:ಹೊಸ್ಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭ್ಯತ್ ಮಂಗಲ-ಮರಗೋಡು ಹೆದ್ದಾರಿ ಡಾಂಬರೀಕರಣ ಕಾಮಗಾರಿಯ ಗುದ್ದಲಿ ಪೂಜೆಯನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ರವರು ನೆರವೇರಿಸಿದರು.ಈ ಸಂದರ್ಭ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ ಹಂಸ , ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಮಂದ್ರೀರ ಮೋಹನ್ ದಾಸ್, ವಲಯ ಕಾಂಗ್ರೆಸ್ ಅಧ್ಯಕ್ಷ ಸದಾ ಡೆನ್ನಿಸ್, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ವಿ ಜಿ ಮೋಹನ್, ಕೋಚನ ಹರಿಪ್ರಸಾದ್ ಹಾಗೂ ಪಕ್ಷದ ಮುಖಂಡರು ಗ್ರಾಮಸ್ಥರು ಹಾಜರಿದ್ದರು.
