ಅಮೃತ ಯುವ ಮೊಗೇರ ವತಿಯಿಂದ 3ನೇ ವರ್ಷದ ರಾಜ್ಯ ಮಟ್ಟದ ಮೊಗೇರ ಕ್ರಿಕೆಟ್ ಪಂದ್ಯ

May 10, 2025 - 09:08
 0  17
ಅಮೃತ ಯುವ ಮೊಗೇರ ವತಿಯಿಂದ 3ನೇ ವರ್ಷದ ರಾಜ್ಯ ಮಟ್ಟದ ಮೊಗೇರ ಕ್ರಿಕೆಟ್ ಪಂದ್ಯ

 ಮಡಿಕೇರಿ: ಅಮೃತ ಯುವ ಮೊಗೇರ ಸಿದ್ದಾಪುರ ಅಮ್ಮತಿ ಹೋಬಳಿ ಇವರ ವತಿಯಿಂದ ತೃತೀಯ ಬಾರಿಗೆ ರಾಜ್ಯ ಮಟ್ಟದ ಮೊಗೇರ ಕ್ರಿಕೆಟ್ ಪಂದ್ಯವು ಮೇ 17 ಹಾಗೂ18 ರಂದು ಮಡಿಕೇರಿಯ ಮ್ಯಾನ್ಸ್ ಕಾಂಪೌಂಡ್ ಮೈದಾನದಲ್ಲಿ ನಡೆಯಲಿದೆ , ಮೊಗೇರ ಬಾಂಧವರಿಗೆ ಮಾತ್ರ ಅವಕಾಶ ಇದ್ದು ಒಟ್ಟು 40 ತಂಡಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ ಪಂದ್ಯದ ಶುಲ್ಕ 3,000 ನಿಗದಿ ಪಡಿಸಲಾಗಿದ್ದು ಕ್ರೀಡಾ ಕೂಟದ ವಿನ್ನರ್ಸ್ ತಂಡಕ್ಕೆ 33,333 ನಗದು ಹಾಗೂ ಆಕರ್ಷಕ ಟ್ರೊಫಿ, ರನ್ನರ್ಸ್ ತಂಡಕ್ಕೆ 22,222 ನಗದು ಹಾಗೂ ಆಕರ್ಷಕ ಟ್ರೊಫಿ ಹಾಗೆಯೇ ವೈಯಕ್ತಿಕ ,ಟ್ರೊಫಿಗಳು ಕೂಡ ಕ್ರೀಡಾಪಟುಗಳಿಗೆ ಸಿಗಲಿದೆ.

ಕ್ರೀಡಾ ಕೂಟದ ಉದ್ಘಾಟನೆಯನ್ನು ಅಮೃತ ಯುವ ಮೊಗೇರ ಸೇವಾ ಸಮಾಜದ ಕ್ರೀಡಾ ಅಧ್ಯಕ್ಷರಾದ ಗಣೇಶ್. ಪಿ. ಸಿ.ರವರು ಉದ್ಘಾಟನೆ ಮಾಡಲಿದ್ದಾರೆ ಮುಖ್ಯ ಅತಿಥಿಗಳಾಗಿ ಅಮೃತ ಯುವ ಮೊಗೇರ ಸೇವಾ ಸಮಾಜದ ಅಧ್ಯಕ್ಷ ರಾಮು ಪಿ. ಎನ್. ಕೊಡಗು ಮೊಗೇರ ಜಿಲ್ಲಾ ಅಧ್ಯಕ್ಷ ಜನಾರ್ಧನ್, ಹಾಗೂ ತುಳು ಸಾಹಿತ್ಯ ಅಕಾಡಮಿಯ ಸದಸ್ಯ ರವಿ. ಪಿ. ಎಂ. ಕೊಡಗು ಜಿಲ್ಲಾ ಮೊಗೇರ ಸೇವಾ ಸಮಾಜದ ಜಿಲ್ಲಾ ಕ್ರೀಡಾ ಅಧ್ಯಕ್ಷ ಎಂ.ಜಿ. ಚಂದ್ರ ಹಾಗೂ ಸಮಾಜದ ಗೌರವ ಅಧ್ಯಕ್ಷರಾದ ಗೌತಮ್, ಶಿವಪ್ಪ ಅಕ್ಕಮ್ಮ ಮೂರ್ತಿ, ಸದಾನಂದ ಮಾಸ್ಟರ್, ವಸಂತ್, ಪಿ.ಕೆ. ಚಂದ್ರು, ದಾಮೋದರ್ ಅನೇಕ ಗಣ್ಯವ್ಯಕಿಗಳು ಪಾಲ್ಗೊಳ್ಳಲಿದ್ದಾರೆ.

ಕ್ರೀಡಾ ಕೂಟದ ಪ್ರಮುಖವಾಗಿ ಆಯೋಜಕರು ಹಾಗೂ ಕೊಡಗು ಪತ್ರಕರ್ತರ ನಡುವೆ ಪ್ರದರ್ಶನ ಪಂದ್ಯವು ನಡೆಯಲಿದೆ, ರಾಜ್ಯ ಮಟ್ಟದ ಪಂದ್ಯ ಆಗಿರುವದರಿಂದ ತಂಡಗಳು ನೊಂದಹಿಸಲು ಈ ಸಂಖ್ಯೆಯನ್ನು ಸಂಪರ್ಕಿಸಲು ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ರಾಮು. 8792100317, ಗಣೇಶ್.9591822879, ಶಿವರಾಜ್, 9035821141, ವಿಶ್ವ, 734906026 ಈ ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಬಹುದು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0