ಆಪರೇಷನ್ ಸಿಂಧೂರ್:ಭಾಗಮಂಡಲದ ಶ್ರೀ ಭಗಂಡೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ

ಮಡಿಕೇರಿ:ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆ ಯಶಸ್ವಿಯಾಗಿರುವುದರಿಂದ ಭಾರತೀಯ ಸೇನೆಯ ಹೆಸರಿನಲ್ಲಿ ಹಾಗೂ ಭಾರತೀಯ ಯೋಧರಿಗೆ ಒಳಿತಾಗಲಿ, ಸೇನೆಗೆ ಮತ್ತಷ್ಟು ಶಕ್ತಿಯನ್ನು ಭಗವಂತನು ಅನುಗ್ರಹಿಸಿ ಕರುಣಿಸಲಿ ಎಂದು ಮಡಿಕೇರಿ ತಾಲ್ಲೂಕಿನ ಭಾಗಮಂಡಲದ ಶ್ರೀ ಭಗಂಡೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಸಂಕಲ್ಪದೊಂದಿಗೆ ಪೂಜೆಯನ್ನು ನೆರವೇರಿಸಲಾಯಿತು.