ಆರ್.ಸಿ.ಬಿ ತಂಡದ ಸಂಭ್ರಮಾಚರಣೆಯಲ್ಲಿ ಕಾಲ್ತುಳಿತ: 11 ಮಂದಿ ಅಮಾಯಕ ಜೀವಗಳ ಸಾವಿಗೆ ರಾಜ್ಯ ಸರ್ಕಾರ ನೇರ ಹೊಣೆ! ನಾಪಂಡ ರವಿ ಕಾಳಪ್ಪ ಆರೋಪ
ಮಡಿಕೇರಿ:ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಗೆಲುವಿನ ಸಂಭ್ರಮಾಚರಣೆಯಲ್ಲಿ ಉಂಟಾದ ಕಾಲ್ತುಳಿತದಲ್ಲಿ 11 ಮಂದಿ ಅಮಾಯಕ ಜೀವಗಳು ಬಲಿಯಾಗಿದೆ. ಇದಕ್ಕೆ ರಾಜ್ಯ ಸರ್ಕಾರ ನೇ ಹೊಣೆಯಾಗಿದೆ. ಮುಖ್ಯಮಂತ್ರಿ,ಉಪ ಮುಖ್ಯಮಂತ್ರಿ ಹಾಗೂ ಗೃಹ ಸಚಿವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ಕೊಡಗು ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಒತ್ತಾಯಿಸಿದ್ದಾರೆ.
ಮಡಿಕೇರಿ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದ ಜನತೆ ರಾಜ್ಯದ ಹಾಗೂ ಕನ್ನಡ ಭಾಷೆಯ ಅಭಿಮಾನದಿಂದ ಆರ್.ಸಿ.ಬಿ ಗೆಲುವಿಗಾಗಿ ದೇವಾಲಯಗಳಲ್ಲಿ ಪೂಜೆ ಸಲ್ಲಿಸಿದ್ದಾರೆ.18 ವರ್ಷಗಳ ಬಳಿಕ ಆರ್.ಸಿ.ಬಿ ತಂಡದ ಐಪಿಎಲ್ ಪ್ರಶಸ್ತಿ ಗೆದ್ದಿದೆ.ಕೋಟ್ಯಾಂತರ ಅಭಿಮಾನಿಗಳ ಕನಸು ನನಸಾಗಿದೆ.ಇಂತಹ ಸಂದರ್ಭ ಯಾವುದೇ ಮುನ್ನೆಚ್ಚರಿಕಾ ಕ್ರಮಗಯ ಕೈಗೊಳ್ಳದೇ ರಾಜ್ಯ ಸರ್ಕಾರ ಏಕಾಏಕಿಯಾಗಿ ಕಾರ್ಯಕ್ರಮ ಆಯೋಜನೆ ಮಾಡಿ 11 ಅಮಾಯಕ ಜೀವಗಳು ಬಲಿಯಾಗಿದೆ.ಇದಕ್ಕೆ ರಾಜ್ಯ ಸರ್ಕಾರ ನೇರ ಹೊಣೆ ಎಂದು ಅವರು ಆರೋಪಿಸಿದರು.
ವಿಧಾನ ಪರಿಷತ್ ಮಾಜಿ ಸದಸ್ಯ ಸುನಿಲ್ ಸುಬ್ರಮಣಿ ಮಾತನಾಡಿ,ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುವ ಆತುರ ಹಾಗೂ ಸಿ.ಎಂ ಸಿದ್ದರಾಮಯ್ಯ ಅವರು ಸಿ.ಎಂ ಆಗಿ ಮುಂದುವರಿಯಲು,ಈ ಕಾರ್ಯಕ್ರಮ ಮಾಡಲು ಮುಂದಾಗಿ 11 ಅಮಾಯಕ ಜೀವಗಳು ಬಲಿಯಾಗಿದೆ ಎಂದು ಆರೋಪಿಸಿದರು.
ಈ ಸಂದರ್ಭ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ, ವಕ್ತಾರರಾದ ಅರುಣ್‌ಕುಮಾರ್, ತಳೂರು ಕಿಶೋರ್ ಕುಮಾರ್, ಪ್ರಮುಖರಾದ ಉಮೇಶ್ ಸುಬ್ರಮಣಿ ಉಪಸ್ಥಿತರಿದ್ದರು.
