ಆಲೂರು ಸಿದ್ದಾಪುರ: ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಕುಂದುಕೊರತೆಗಳ ಬಗ್ಗೆ ಮಾಹಿತಿ ಪಡೆದ ಉಪವಿಭಾಗಾಧಿಕಾರಿ

ಸೋಮವಾರಪೇಟೆ(Coorgdaily): ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ ಅವರು ಹಾಗೂ ತಹಶೀಲ್ದಾರ್ ಕೃಷ್ಣಮೂರ್ತಿ ಆಲೂರು ಸಿದ್ದಾಪುರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿನ ಕುಂದುಕೊರತೆ ಬಗ್ಗೆ ವೈದ್ಯಾಧಿಕಾರಿಗಳಿಂದ ಮಾಹಿತಿ ಪಡೆದರು.