ಆಲ್ ಸ್ಟಾರ್ ಕೊಡಗು ವರ್ಲ್ಡ್ ಕಪ್: ಆರನೇ ಪ್ರಿ-ಕ್ವಾಟರ್ ಫೈನಲ್ ಪಂದ್ಯ:ಮಿಲನ್ಸ್ ಎಫ್.ಸಿ ಅಮ್ಮತ್ತಿ ತಂಡಕ್ಕೆ ಭರ್ಜರಿ ಗೆಲುವು

May 4, 2025 - 03:16
 0  80
ಆಲ್ ಸ್ಟಾರ್ ಕೊಡಗು ವರ್ಲ್ಡ್ ಕಪ್: ಆರನೇ ಪ್ರಿ-ಕ್ವಾಟರ್ ಫೈನಲ್ ಪಂದ್ಯ:ಮಿಲನ್ಸ್ ಎಫ್.ಸಿ ಅಮ್ಮತ್ತಿ ತಂಡಕ್ಕೆ ಭರ್ಜರಿ ಗೆಲುವು

ಮಡಿಕೇರಿ:ಕೊಡಗು ಜಿಲ್ಲೆಯ ಫುಟ್ಬಾಲ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಗೋಣಿಕೊಪ್ಪಲಿನ ಆಲ್ ಸ್ಟಾರ್ ಯೂತ್ ಕ್ಲಬ್ ಗೋಣಿಕೊಪ್ಪಲಿನ ಜಿಎಂಪಿ ಶಾಲಾ ಮೈದಾನದಲ್ಲಿ ಹಮ್ಮಿಕೊಂಡಿರುವ ಕೊಡಗು ವರ್ಲ್ಡ್ ಕಪ್ ಆಲ್ ಇಂಡಿಯಾ ಸೂಪರ್ ಫೈವ್ಸ್ ಮೂರನೇ ದಿನದ ಆರನೇ ಪ್ರಿ-ಕ್ವಾಟರ್ ಫೈನಲ್ ಪಂದ್ಯದಲ್ಲಿ ಮಿಲನ್ಸ್ ಎಫ್.ಸಿ ಅಮ್ಮತ್ತಿ ತಂಡವು 04-01 ಗೋಲುಗಳ ಅಂತರದಿಂದ ಬಾಲು ಮೆಮೋರಿಯಲ್ ತಿರುಚ್ಚಿ ತಂಡವನ್ನು ಮಣಿಸಿ ಕ್ವಾಟರ್ ಫೈನಲ್ ಗೆ ಅರ್ಹತೆ ಪಡೆದುಕೊಂಡಿದೆ.ಮಿಲನ್ಸ್ ತಂಡದ ಪರವಾಗಿ ಯೋಗಿತ್,ನಿಖಿಲ್, ಪಾಂಡ್ಯ ಹಾಗೂ ದಿವಾಕರ್ ತಲಾ ಒಂದು ಗೋಲು ಬಾರಿಸಿದರು.ತಿರುಚ್ಚಿ ತಂಡದ ಪರವಾಗಿ ವಿವೇಕ್ ಗೋಲುಗಳಿಸಿದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0