ಇಂಡೋ-ಪಾಕ್ ಕದನ ವಿರಾಮ ಒಪ್ಪಂದ:ಪಾಕಿಸ್ತಾನದಿಂದ ಕದನ ವಿರಾಮ ಉಲ್ಲಂಘನೆ

ಹೊಸದಿಲ್ಲಿ: ಕೆಲದಿನಗಳಿಂದ ನಡೆಯುತ್ತಿದ್ದ ಸೇನಾ ಕಾರ್ಯಾಚರಣೆ ನಿಲ್ಲಿಸಲು ಭಾರತ ಮತ್ತು ಪಾಕಿಸ್ತಾನದ ಡಿಜಿಎಂಗಳ ಮಧ್ಯೆ ಕದನ ವಿರಾಮ ಒಪ್ಪಂದ ನಡೆದಿತ್ತು. ಆದರೆ ಪಾಕಿಸ್ತಾನವು ಕದನ ವಿರಾಮವನ್ನು ಉಲ್ಲಂಘಿಸಿದೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ರಿ ಹೇಳಿದ್ದಾರೆ. ಜಮ್ಮು – ಕಾಶ್ಮೀರದ ಶ್ರೀನಗರದಲ್ಲಿ ಪಾಕಿಸ್ತಾನ ಸೇನೆಯಿಂದ ದಾಳಿ ವರದಿಯಾಗುತಿದ್ದಂತೆ,ಶನಿವಾರ ಆಯೋಜಿಸಿದ್ದ ತುರ್ತು ಸುದ್ದಿಗೋಷ್ಠಿಯಲ್ಲಿ ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ರಿ ಅವರು ಮಾತನಾಡಿದರು. ಕದನವಿರಾಮವನ್ನು ಗಮದಲ್ಲಿಟ್ಟುಕೊಂಡು ಪಾಕಿಸ್ತಾನವು ಸಂಯಮದಿಂದ ವರ್ತಿಸಬೇಕು. ಅಂತರರಾಷ್ಟ್ರೀಯ ಗಡಿಯಲ್ಲಿ ಕದನ ವಿರಾಮ ಉಲ್ಲಂಘಿಸಿದ್ದಕ್ಕೆ ಭಾರತ ಸೇನೆಯು ಅದಕ್ಕೆ ತಕ್ಕ ಪ್ರತಿಕ್ರಿಯೆ ನೀಡಲು ಆದೇಶ ನೀಡಲಾಗಿದೆ ಎಂದರು.
What's Your Reaction?






