ಎಮ್ಮೆ ಮಾಡುವಿನಲ್ಲಿ ಮುಸಲ್ಮಾನ ಬಾಂಧವರಿಂದ ತ್ಯಾಗ ಬಲಿದಾನದ ಬಕ್ರೀದ್ ಆಚರಣೆ

ಎಮ್ಮೆ ಮಾಡುವಿನಲ್ಲಿ ಮುಸಲ್ಮಾನ ಬಾಂಧವರಿಂದ ತ್ಯಾಗ ಬಲಿದಾನದ ಬಕ್ರೀದ್ ಆಚರಣೆ

ವರದಿ:ಝಕರಿಯ ನಾಪೋಕ್ಲು

ನಾಪೋಕ್ಲು : ನಾಪೋಕ್ಲು ಬಳಿಯ ಎಮ್ಮೆಮಾಡುವಿನ ಜುಮಾ ಮಸೀದಿಯಲ್ಲಿ ಮುಸಲ್ಮಾನ ಭಾಂದವರು ತ್ಯಾಗ ಬಲಿದಾನದ ಸಂಕೇತವಾಗಿ ಆಚರಿಸಲ್ಪಡುವ ಪವಿತ್ರ ಬಕ್ರೀದ್ ಹಬ್ಬವನ್ನು ಸಂಭ್ರಮ ಶ್ರದ್ದಾ ಭಕ್ತಿಯಿಂದ ಆಚರಿಸಿದರು.

 ಶನಿವಾರ ಬೆಳಿಗ್ಗೆ ಎಮ್ಮೆಮಾಡುವಿನ ಜುಮಾ ಮಸೀದಿಯಲ್ಲಿ ಧರ್ಮ ಗುರುಗಳಾದ ರಾಝಿಕ್ ಫೈಝಿ ಅವರ ನೇತೃತ್ವದಲ್ಲಿ ಸಾಮೂಹಿಕ ಈದ್ ನಮಾಜ್ ನೆರವೇರಿಸಲಾಯಿತು.ಬಳಿಕ ಇತಿಹಾಸ ಪ್ರಸಿದ್ಧ ಸೂಫಿ ಶಹೀದ್ ದರ್ಗಾಕ್ಕೆ ತೆರಳಿದ ಸಮುದಾಯ ಬಾಂಧವರು ನಾಡಿನ ಸುಭೀಕ್ಷಕ್ಕಾಗಿ ಮತ್ತು ನಾಡಿನಲ್ಲಿ ಮರಣ ಹೊಂದಿದವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಪರಸ್ಪರ ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು. 

ಈ ಸಂದರ್ಭ ಎಮ್ಮೆಮಾಡು ತಾಜುಲ್ ಇಸ್ಲಾಂ ಮುಸ್ಲಿಂ ಜಮಾತ್ ಅಧ್ಯಕ್ಷರಾದ ಅಬೂಬಕ್ಕರ್ ಸಾಖಾಫಿ, ಉಪಾಧ್ಯಕ್ಷರಾದ ಬಿ.ಯು.ಅಶ್ರಫ್, ಕಾರ್ಯದರ್ಶಿ ಹಾರಿಸ್, ಇಲ್ಯಾಸ್ ಅಲ್ ಹೈದರೂಸಿ ತಂಙಳ್ ಸೇರಿದಂತೆ ಜಮಾಅತ್ ಆಡಳಿತ ಮಂಡಳಿ ಪದಾಧಿಕಾರಿಗಳು,ಜಮಾಅತ್ ನ ಸರ್ವ ಸದಸ್ಯರು ಪಾಲ್ಗೊಂಡಿದ್ದರು.