ಏಪ್ರಿಲ್ 28: ಮಡಿಕೇರಿ ನಗರಸಭಾ ಅಧ್ಯಕ್ಷ -ಉಪಾಧ್ಯಕ್ಷ ಚುನಾವಣೆ

Apr 20, 2025 - 17:52
 0  389
ಏಪ್ರಿಲ್ 28: ಮಡಿಕೇರಿ ನಗರಸಭಾ ಅಧ್ಯಕ್ಷ -ಉಪಾಧ್ಯಕ್ಷ ಚುನಾವಣೆ

ಮಡಿಕೇರಿ :-ನಗರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ಏಪ್ರಿಲ್, 28 ರಂದು 11 ಗಂಟೆಗೆ ನಡೆಯಲಿದೆ. ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಹಾಗೂ ಉಪಾಧ್ಯಕ್ಷರ ಸ್ಥಾನ ಸಾಮಾನ್ಯಕ್ಕೆ ಮೀಸಲಾಗಿದೆ. ಏ.28 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನಾಮಪತ್ರ ಸಲ್ಲಿಸಲು ಅವಕಾಶ ಇದೆ. ನಂತರ ಪರಿಶೀಲನಾ ಕಾರ್ಯ ನಡೆಯಲಿದ್ದು, ವಾಪಸ್ ತೆಗೆದುಕೊಳ್ಳಲು ಕಾಲಾವಕಾಶ ಕೊಡಲಾಗುವುದು. ನಂತರ ಕೈಎತ್ತುವ ಮೂಲಕ ಅಧ್ಯಕ್ಷ, ಉಪಾಧ್ಯಕ್ಷರನ್ನು ಆಯ್ಕೆ ಮಾಡಬಹುದು ಎಂದು ಚುನಾವಣಾಧಿಕಾರಿ ವಿನಾಯಕ ನರ್ವಡೆ ಅವರು ಆದೇಶದಲ್ಲಿ ತಿಳಿಸಿದ್ದಾರೆ.

What's Your Reaction?

Like Like 1
Dislike Dislike 0
Love Love 1
Funny Funny 0
Angry Angry 0
Sad Sad 0
Wow Wow 0