ಐಗೂರು: ಗುಂಡು ಹೊಡೆದುಕೊಂಡು ಆತ್ಮಹತ್ಯೆ

ಸೋಮವಾರಪೇಟೆ: ಸಮೀಪದ ಐಗೂರು ಗ್ರಾಮದ 35 ವರ್ಷ ಪ್ರಾಯದ ಮಧು(ಅಶೋಕ )ಎಂಬ ವ್ಯಕ್ತಿ ತಲೆಗೆ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ನಡೆದಿದೆ.ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ಘಟನೆ ನಡೆದಿದ್ದು,ಜೀವನದಲ್ಲಿ ಜಿಗುಪ್ಸೆಯಿಂದ ತಾನೇ ಗುಂಡು ಹೊಡೆದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ.ಸ್ಥಳಕ್ಕೆ ಸೋಮವಾರಪೇಟೆ ಠಾಣಾ ಪೊಲೀಸರು ಭೇಟಿ ನೀಡಿ ಮುಂದಿನ ಕ್ರಮ ಜರುಗಿಸಿದ್ದಾರೆ.