ಕಡಗಂದಲ್ಲಿ ಬಡಹೆಣ್ಣು ಮಕ್ಕಳ ಸಾಮೂಹಿಕ ವಿವಾಹ ಹಾಗೂ ಧಾರ್ಮಿಕ ಪ್ರಭಾಷಣ ಕಾರ್ಯಕ್ರಮಕ್ಕೆ ಚಾಲನೆ
ವಿರಾಜಪೇಟೆ(ಕಡಂಗ): ಎಸ್.ಕೆ.ಎಸ್.ಎಸ್.ಎಫ್ ಹಾಗೂ ಎಸ್.ವೈ.ಎಸ್ ಕಡಂಗ ಶಾಖಾ ವತಿಯಿಂದ 3ನೇ ವರ್ಷದ ಸಾಮೂಹಿಕ ವಿವಾಹ ಕಾರ್ಯಕ್ರಮ ಮತ್ತು ಧಾರ್ಮಿಕ ಪ್ರಭಾಷಣ ಕಾರ್ಯಕ್ರಮಕ್ಕೆ ಕಡಂಗ ಕೊಕ್ಕಂಡಬಾಣೆ ವಠಾರದಲ್ಲಿ ಚಾಲನೆ ದೊರೆತಿದೆ.ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ವಾಗ್ಮಿ ನೌಷಾದ್ ಬಾಖವಿ ಮುಖ್ಯ ಪ್ರಭಾಷಣ ನಡೆಸಿದರು.ಕಾರ್ಯಕ್ರಮದಲ್ಲಿ 5 ಬಡ ಹೆಣ್ಣು ಮಕ್ಕಳ ವಿವಾಹ ಕಾರ್ಯಕ್ರಮ ನಡೆಯಲಿದೆ.
ವರದಿ:ನೌಫಲ್ ಕಡಂಗ