ಕರಡ ಗ್ರಾಮದಲ್ಲಿ ಮನೆ ಮೇಲೆ ಮರಬಿದ್ದು ಅಪಾರ ನಷ್ಟ

ವರದಿ:ಝಕರಿಯ ನಾಪೋಕ್ಲು
ನಾಪೋಕ್ಲು(Coorgdaily) :ನರಿಯಂದಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರಡ ಗ್ರಾಮದ ನಿವಾಸಿ ಬೋಜಮ್ಮ ಅವರ ವಾಸದ ಮನೆಯ ಮೇಲೆ ಮಂಗಳವಾರ ಸುರಿದ ಧಾರಾಕಾರ ಮಳೆಗೆ ಮನೆ ಸಮೀಪದ ಮರ ಬಿದ್ದು ಮನೆಯ ಮೇಲ್ಚಾವಣಿ ಹಾಗೂ ಹೆಂಚುಗಳು ಹಾನಿಯಾಗಿ ಅಪಾರ ನಷ್ಟ ಸಂಭವಿಸಿದೆ.
ಸ್ಥಳಕ್ಕೆ ನಾಪೋಕ್ಲು ಕಂದಾಯ ಇಲಾಖೆಯ ಗ್ರಾಮ ಲೆಕ್ಕಿಗೆ ಅಮೃತ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.