ಕಾಂಗ್ರೆಸ್ ಕಾರ್ಯಕರ್ತನ ಮನೆಗೆ: ಶಾಸಕ ಎ.ಎಸ್ ಪೊನ್ನಣ್ಣ ಭೇಟಿ: ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಶಾಸಕ
ವಿರಾಜಪೇಟೆ: ಇತ್ತೀಚೆಗೆ ನಿಧನರಾದ ಉಮ್ಮಣ ಕುಟ್ಟಡ ಸುರೇಶ್ ರವರ ಮನೆಗೆ ಭೇಟಿ ನೀಡಿದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಮೃತರ ಮನೆಯವರಿಗೆ ಸಾಂತ್ವನ ಹೇಳಿದರು.
ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಹಾಗೂ ಶಾಸಕರ ಕಟ್ಟಾ ಬೆಂಬಲಿಗರಾಗಿದ್ದ ಸುರೇಶ್ ರವರ ನಿಧನ ಸಂದರ್ಭ ಶಾಸಕರು ಕಾರ್ಯನಿಮಿತ್ತ ಜಿಲ್ಲೆಯಲ್ಲಿ ಇರದ ಕಾರಣ, ಇಂದು ಭೇಟಿ ನೀಡಿ ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದರು.
ಈ ಸಂದರ್ಭದಲ್ಲಿ ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಟ್ಟಡ ರಂಜಿ ಪೂಣ್ಣಚ್ಚ ಹಾಗೂ ಪ್ರಮುಖರು ಉಪಸ್ಥಿತರಿದ್ದರು.