ಕಾಲ್ತುಳಿತ ಅನಿರೀಕ್ಷಿತ, ಸಾವಿನಲ್ಲಿ ರಾಜಕೀಯ ಮಾಡಬಾರದು: ರಹೀಂ ಖಾನ್

ಕಾಲ್ತುಳಿತ ಅನಿರೀಕ್ಷಿತ, ಸಾವಿನಲ್ಲಿ ರಾಜಕೀಯ ಮಾಡಬಾರದು: ರಹೀಂ ಖಾನ್

ಕುಶಾಲನಗರ: ಆರ್.ಸಿ.ಬಿ ವಿಜಯೋತ್ಸವದಲ್ಲಿ ಉಂಟಾದ ಸಾವು-ನೋವು ಅನಿರೀಕ್ಷಿತ. ಸಾವಿನಲ್ಲಿ ರಾಜಕೀಯ ಮಾಡುವುದು ಶೋಭೆ ತರುವಂಹದ್ದಲ್ಲ. ತನಿಖೆ ನಡೆಯುತ್ತಲಿದೆ.‌ ಸರ್ಕಾರ ಮುಂದೆ ಕ್ರಮ ಕೈಗೊಳ್ಳಲಿದೆ ಎಂದು ಪೌರಾಡಳಿತ ಹಾಗೂ ಹಜ್ ಸಚಿವ ರಹೀಂ ಖಾನ್ ಹೇಳಿದರು. 

ಕುಶಾಲನಗರದ ಪ್ರವಾಸಿ ಮಂದಿರದಲ್ಲಿ ಪತ್ರಕರ್ತರೊಡನೆ ಮಾತನಾಡಿದ ಅವರು, ಬಿಜೆಪಿಯವರು ಪ್ರತಿಯೊಂದರಲ್ಲಿ ರಾಜಕೀಯ ಮಾಡುತ್ತಾರೆ. ಕೆಲವೊಮ್ಮೆ ಅನಾಹುತಗಳು ಸಂಭವಿಸುತ್ತದೆ. ಕುಂಭಮೇಳದಲ್ಲೂ ಹೆಚ್ಚಿನ ಸಂಖ್ಯೆಯಲ್ಲಿ ಸಾವು ನೋವು ಸಂಭವಿಸಿವೆ. ಅದಕ್ಕೆ ಯಾರು ಹೊಣೆ ಎಂದು ಪ್ರಶ್ನಿಸಿದರು. ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದಾಗಲೂ ಅನಾಹುತಗಳು ಸಂಭವಿಸಿವೆ.‌ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದೆ. ನಂತರ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದರು. ಸಚಿವ ಸಂಪುಟ ಪುನರ್ ರಚನೆ ಬಗ್ಗೆ ಮಾತನಾಡಿದ ಅವರು, ಹೈಕಮಾಂಡ್ ಗೆ ಬಿಟ್ಟ ತೀರ್ಮಾನವಾಗಿದೆ ಎಂದರು. ಈ ಸಂದರ್ಭ ಸ್ಥಳೀಯ ಶಾಸಕ ಡಾ.ಮಂತರ್ ಗೌಡ ಇದ್ದರು.‌