ಕುಶಾಲನಗರ: 4.50. ಕೋಟಿ ವೆಚ್ಚದ ಕಾಮಗಾರಿಗೆ ಶಾಸಕ ಡಾ. ಮಂತರ್ ಗೌಡ ಚಾಲನೆ

ಕುಶಾಲನಗರ:ಕೊಣನೂರು- ಮಾಕುಟ್ಟ ರಾಜ್ಯ ಹೆದ್ದಾರಿಯ (91)ರ ಕುಶಾಲನಗರದಿಂದ-ಕೂಡಿಗೆವರೆಗೆ ಆಯ್ದ ಭಾಗಗಳಲ್ಲಿ ಮರು ಡಾಂಬರೀಕರಣ ಸೇರಿದಂತೆ ಸಣ್ಣ ಪ್ರಮಾಣದ ಮೋರಿ ನಿರ್ಮಾಣಕ್ಕೆ 4.50. ಕೋಟಿ ವೆಚ್ಚದ ಕಾಮಗಾರಿಗೆ ಶಾಸಕ ಡಾ. ಮಂತರ್ ಗೌಡ ಭೂಮಿಪೂಜೆ ಸಲ್ಲಿಸಿ ಚಾಲನೆ ನೀಡಿದರು.ನಂತರ ಮಾತನಾಡಿದ ಶಾಸಕ ಡಾ. ಮಂತರ್ ಗೌಡ, ಕ್ಷೇತ್ರದ ವ್ಯಾಪ್ತಿಯಲ್ಲಿ ಅಭಿವೃದ್ಧಿಗೆ ಪೂರಕವಾದ ಯೋಜನೆಗಳನ್ನು ಜಾರಿಗೆ ತಂದು ಅದರ ಮೂಲಕ ಮೂಲಭೂತ ಸೌಕರ್ಯಗಳ ಜೊತೆಯಲ್ಲಿ ಅಭಿವೃದ್ಧಿಗೆ ಚಿಂತನೆ ಹರಿಸಲಾಗುವುದು, ಕೂಡಿಗೆ- ಕುಶಾಲನಗರ ರಸ್ತೆಯಲ್ಲಿ ವಾಹನಗಳ ದಟ್ಟಣೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ ಲೋಕೋಪಯೋಗಿ ಇಲಾಖೆಯ ವತಿಯಿಂದ 4.50. ಕೋಟಿ ರೂ ವೆಚ್ಚದ ರಸ್ತೆಯ ಮರು ಡಾಂಬರಿಕರಣದ ಭೂಮಿ ಪೂಜೆ ನೆರವೇರಿಸಲಾಗಿದೆ, ಗುಣಮಟ್ಟದ ಕಾಮಗಾರಿಯನ್ನು ನಿರ್ವಹಣೆ ಮಾಡಲು ಸಂಬಂಧಿಸಿದ ಇಲಾಖೆಯವರಿಗೆ, ಮತ್ತು ಗುತ್ತಿಗೆದಾರರಿಗೆ ಸೂಚನೆ ನೀಡಿದರು.
ಗ್ಯಾರಂಟಿ ಅನುಷ್ಠಾನ ಸಮಿತಿಯ ತಾಲ್ಲೂಕು ಅಧ್ಯಕ್ಷ ವಿ.ಪಿ. ಶಶಿಧರ್ ಮಾತಾನಾಡಿ, ಮಡಿಕೇರಿ ಕ್ಷೇತ್ರದ ಅಭಿವೃದ್ಧಿಯಲ್ಲಿ ಶಾಸಕರು ತೊಡಗಿರುವ ಬಗ್ಗೆ ಸವಿಸ್ತಾರವಾದ ಮಾಹಿತಿಯನ್ನು ನೀಡಿದರು.ಈ ಸಂದರ್ಭ ಕುಶಾಲನಗರ ಪುರಸಭೆ ಅಧ್ಯಕ್ಷೆ ಜಯಲಕ್ಷ್ಮಿ ಚಂದ್ರು, ನಗರ ಕಾಂಗ್ರೆಸ್ ಅಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್ ಕೂಡಿಗೆ ಗ್ರಾಮ ಪಂಚಾಯತಿ ಸದಸ್ಯ ಟಿ.ಪಿ.ಹಮೀದ್, ಕೂಡುಮಂಗಳೂರು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಸಂತೋಷ್, ಮಾಜಿ ಅಧ್ಯಕ್ಷ ಕೆ.ವಿ.ಸಣ್ಣಪ್ಪ, ಸದಸ್ಯರಾದ ಸುರೇಶ್, ಸಾಗರ್, ಈರಪ್ಪ, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ವೆಂಕಟೇಶ ನಾಯಕ್, ಸೇರಿದಂತೆ ಕಾಂಗ್ರೆಸ್ ಪಕ್ಷದ ವಿವಿಧ ಘಟಕದ ಪದಾಧಿಕಾರಿಗಳು ಹಾಜರಿದ್ದರು.