ಕುಶಾಲನಗರ: ಇಂದು ಅಖಿಲ ಭಾರತ ವೀರಶ-ಲಿಂಗಾಯುತ ಕುಶಾಲನಗರ ಘಟಕದಿಂದ ಬಸವ ಜಯಂತಿ

ಕೂಡಿಗೆ:ಅಖಿಲ ಭಾರತ ವೀರಶೈವ - ಲಿಂಗಾಯತ ಮಹಾಸಭ, ಕುಶಾಲನಗರ ತಾಲ್ಲೂಕು ಘಟಕದ ವತಿಯಿಂದ ತಾಲ್ಲೂಕು ಕೇಂದ್ರವಾದ ಕುಶಾಲನಗರ ಪಟ್ಟಣದಲ್ಲಿ ಮೇ 17 ಇಂದು ( ಶನಿವಾರ ) ಐದನೇ ವರ್ಷದ ಬಸವ ಜಯಂತಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.ಪಟ್ಟಣದ ಬೈಚನಹಳ್ಳಿ ಶ್ರೀ ಮಾರಿಯಮ್ಮ ದೇವಸ್ಥಾನದಿಂದ ಸಂಜೆ 4.00 ಗಂಟೆಗೆ ಶ್ರೀ ಬಸವೇಶ್ವರರ ಭಾವಚಿತ್ರದೊಂದಿಗೆ ನಂದಿಧ್ವಜದೊಂದಿಗೆ ಪಟ್ಟಣದಲ್ಲಿ ಮೆರವಣಿಗೆ ಏರ್ಪಡಿಸಲಾಗಿದೆ ಎಂದು ಮಹಾಸಭಾದ ತಾಲ್ಲೂಕು ಘಟಕದ ಅಧ್ಯಕ್ಷ ಎಚ್.ಎಂ.ಮಧುಸೂದನ್ ತಿಳಿಸಿದ್ದಾರೆ.
ಮೆರವಣಿಗೆಯ ಬಳಿಕ ಸಂಜೆ 4.30 ರ ನಂತರ ಪಟ್ಟಣದ ಗಾಯತ್ರಿ ಕಲ್ಯಾಣ ಮಂದಿರದಲ್ಲಿ ಬಸವ ಜಯಂತಿಯ ವೇದಿಕೆ ಕಾರ್ಯಕ್ರಮ ನಡೆಯಲಿದೆ. ತೊರೆನೂರು ವಿರಕ್ತ ಮಠದ ಶ್ರೀ ಮಲ್ಲೇಶ ಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ ಆಶಯ ನುಡಿಯಾಡಲಿದ್ದು, ವಿರಾಜಪೇಟೆಯ ಅರಮೇರಿ- ಕಳಂಚೇರಿ ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಲಿದ್ದಾರೆ.
ವಿವಿಧ ಮಠಾಧೀಶರಾದ ಕನ್ನಡ ಮಠದ ಶ್ರೀ ಚನ್ನಬಸವದೇಶಿ ಕೇಂದ್ರ ಸ್ವಾಮೀಜಿ, ಕಲ್ಮಠದ ಶ್ರೀ ಮಹಾಂತ ಸ್ವಾಮೀಜಿ ಸೇರಿದಂತೆ ವಿವಿಧ ಮಠಾಧಿಪತಿಗಳು ಭಾಗವಹಿಸಲಿದ್ದಾರೆ. ಅಖಿಲ ಭಾರತ ವೀರಶೈವ - ಲಿಂಗಾಯತ ಮಹಾಸಭದ ರಾಜ್ಯ ಘಟಕದ ಅಧ್ಯಕ್ಷರೂ ಆದ ನಿವೃತ್ತ ಹಿರಿಯ ಪೊಲೀಸ್ ಅಧಿಕಾರಿ ಡಾ ಶಂಕರ್ ಬಿದರಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಮಹಾಸಭದ ತಾಲ್ಲೂಕು ಘಟಕದ ಅಧ್ಯಕ್ಷ ಎಚ್.ಎಂ.ಮಧುಸೂದನ್ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಗುಂಡ್ಲುಪೇಟೆ ತಾಲ್ಲೂಕಿನ ಕಬ್ಬಳ್ಳಿ ಸರ್ಕಾರಿ ಪಿಯು ಕಾಲೇಜಿನ ಉಪ ಪ್ರಾಂಶುಪಾಲ ಎಸ್.ಎಂ.ಸಿದ್ದರಾಜಪ್ಪ ಉಪನ್ಯಾಸ ನೀಡಲಿದ್ದಾರೆ.ಮಹಾಸಭದ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ವಿ.ಶಿವಪ್ಪ , ಪ್ರಧಾನ ಕಾರ್ಯದರ್ಶಿ ಟಿ.ಎಸ್.ಶಾಂಭಶಿವಮೂರ್ತಿ,ಡಿವೈಎಸ್ಪಿ ಆರ್.ವಿ.ಗಂಗಾಧರಪ್ಪ, ಮಹಾಸಭಾದ ಕುಶಾಲನಗರ ಘಟಕದ ಮಾಜಿ ಅಧ್ಯಕ್ಷ ಎಂ.ಎಸ್.ಶಿವಾನಂದ, ಜಿಲ್ಲಾ ವೀರಶೈವ ನೌಕರರ ಸಂಘದ ಅಧ್ಯಕ್ಷ ಎಸ್.ನಂದೀಶ್ ಸೇರಿದಂತೆ ಮಹಾಸಭದ ವಿವಿಧ ಘಟಕದ ಪ್ರಮುಖರು ಭಾಗವಹಿಸಲಿದ್ದಾರೆ, ಎಂದು ಮಹಾಸಭದ ತಾಲ್ಲೂಕು ಘಟಕದ ಕಾರ್ಯದರ್ಶಿ ಎನ್.ಧರ್ಮೇಂದ್ರ ತಿಳಿಸಿದ್ದಾರೆ.ಮಹಾಸಭದ ವತಿಯಿಂದ ಈಗಾಗಲೇ ನಡೆದಿರುವ ಕ್ರೀಡಾಕೂಟದಲ್ಲಿ ವಿಜೇತಗೊಂಡವರಿಗೆ ಇದೇ ವೇಳೆಯಲ್ಲಿ ಬಹುಮಾನ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ.
ವರದಿ: ಕೆ.ಆರ್ ಗಣೇಶ್ ಕೂಡಿಗೆ